Rotary Shivamogga ಡಿವಿಜಿ ಅವರ ಮಂಕುತಿಮ್ಮನ ಕಗ್ಗದಲ್ಲಿ ಬದುಕಿಗೆ ಅತ್ಯಮೂಲ್ಯ ಸಂದೇಶಗಳು ಇದ್ದು, ಜನರು ಸಾಹಿತ್ಯದಲ್ಲಿ ಅಂಶಗಳನ್ನು ಅರಿತುಕೊಳ್ಳಬೇಕು ಎಂದು ಸಾಹಿತಿ, ವಿದ್ವಾನ್ ಜಿ.ಎಸ್.ನಟೇಶ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರೋಟರಿ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಕುತಿಮ್ಮನ ಕಗ್ಗ ಕುರಿತು ಮಾತನಾಡಿ, ಕನ್ನಡದಲ್ಲಿ ಮಾತನಾಡಿದರೆ ಅದೇ ನಿತ್ಯೋತ್ಸವ. ನಮ್ಮ ಭಾಷೆಯ ಬಗ್ಗೆ ಪ್ರತಿಯೊಬ್ಬರಿಗೂ ಹೆಮ್ಮೆ ಇರಬೇಕು. ನಾವೆಲ್ಲರೂ ಪ್ರಕೃತಿಗೆ ಪೂರಕವಾಗಿ ಬದುಕಬೇಕೆ ಹೊರತು ವಿರುದ್ಧವಾಗಿ ಹೋಗಬಾರದು. ಪ್ರಾಣಿ ಪಕ್ಷಿಗಳನ್ನು ನೋಡಿ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ಮಂಕುತಿಮ್ಮನ ಕಗ್ಗವನ್ನು ಓದುತ್ತಿದ್ದರೆ ನಮ್ಮ ಬದುಕು ಬದಲಾಗುತ್ತದೆ. ಜೀವನದಲ್ಲಿ ಭರವಸೆ ಮೂಡುತ್ತದೆ. ಪ್ರತಿಯೊಬ್ಬರೂ ಮಂಕುತಿಮ್ಮನ ಕಗ್ಗ ಅಧ್ಯಯನ ಮಾಡಬೇಕು ಎಂದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಪೂರಕ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.
Rotary Shivamogga ಸಭೆಗೆ ನೂತನ ಸದಸ್ಯರನ್ನು ಪರಿಚಯಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ.ಬಿ.ಆರ್., ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಕಡಿದಾಳ್ ಗೋಪಾಲ್, ಮ್ಯಾನೇಜಿಂಗ್ ಟ್ರಸ್ಟಿ ಕೆ.ಬಿ.ರವಿಶಂಕರ್, ಚಂದ್ರಹಾಸ ಪಿ.ರಾಯ್ಕರ್, ಎಸ್.ಸಿ.ರಾಮಚಂದ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Rotary Shivamogga ನಾವೆಲ್ಲರೂ ಪ್ರಕೃತಿಗೆ ಪೂರಕ ಬದುಕಬೇಕು, ವಿರುದ್ಧ ಹೋಗಬಾರದು – ವಿದ್ವಾನ್ ಜಿ.ಎಸ್.ನಟೇಶ್
Date:
