Saturday, December 6, 2025
Saturday, December 6, 2025

Department of Labor ಪರಿಶಿಷ್ಠ ಜಾತಿ/ ವರ್ಗಗಳ ನಿರುದ್ಯೋಗಿ ಯುವಕರಿಗೆ ಸಂಸ್ಥೆಗಳು ನೌಕರಿ ನೀಡಿದರೆ ಮ್ಯಾನೇಜ್ ಮೆಂಟಿಗೆ ತಲಾ ₹ 7000 ನೀಡಿಕೆ- ಸಚಿವ ಸಂತೋಷ್ ಲಾಡ್

Date:

Department of Labor ಕಾರ್ಮಿಕ ಇಲಾಖೆಯ ಹೊಸ ಯೋಜನೆಗಳನ್ನು ಎಲ್ಲಾ ರೀತಿಯ ಕಾರ್ಮಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು.

ಅವರಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರಾತಾ ಮಂಡಳಿ, ಸಾರಿಗೆ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಲಾಖೆಯಡಿ ಸರ್ಕಾರ ಸಾಂಸ್ಕೃತಿಕ ಕಾರ್ಮಿಕರ ಕಾರ್ಯಕರ್ತರ ಕಾಯಿದೆಗೆ ಉದ್ದೇಶಿಸಿದ್ದು, ಅದಕ್ಕಾಗಿ ನಿಯಮಗಳನ್ನು ಸಿದ್ಧಪಡಿಸುವ ಕೆಲಸ ಇಲಾಖೆಯಡಿ ಮಾಡಲಾಗುತ್ತಿದೆ.ಆಶಾದೀಪ ಯೋಜನೆಯಡಿ
ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಕರಿಗೆ ಸಂಸ್ಥೆಗಳು ಕೆಲಸ ನೀಡಿದಲ್ಲಿ ಅಥವ ಅಪ್ರೆಂಟೈಸರ್ ನೀಡದಲ್ಲಿ ತಿಂಗಳಿಗೆ ಒಬ್ಬ ಅಭ್ಯರ್ಥಿಗೆ ಸುಮಾರು 7ಸಾವಿರ ರೂಪಾಯಿವರೆಗೆ ಮ್ಯಾನೇಜ್ ಮೆಂಟಿಗೆ ರಿಅಂಬ್ರೈಸ್ ಮಾಡಲಾಗುವುದು ಎಂದು ಸಚಿವ ಲಾಡ್ ಮಾಹಿತಿ ನೀಡಿದರು.

Department of Labor ಈ ಕಾಂಗ್ರೆಸ್ ಸರ್ಕಾರ ಬಂದಮೇಲೆ ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸಲೆಂದು ತಾವು ಕಾರ್ಮಿಕ ಸಚಿವರಾದ ಬಳಿಕ ಹೊಸಹೊಸ ಯೋಜನೆಗಳನ್ನು ತರಲಾಗಿದೆ. ರಾಜ್ಯದಲ್ಲಿ ಪ್ರಸಕ್ತ 91 ವರ್ಗದ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾರ್ಮಿಕರನ್ನು ಗುರುತಿಸಿ ಕಾರ್ಮಿಕರ ದತ್ತಾಂಶಗಳನ್ನು ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ.ಪ್ರಾರಂಭಿಕವಾಗಿ ಹೊಸಹೋಸ ಯೋಜನೆಗಳನ್ನು ಕಾರ್ಮಿಕರಿಗೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆಯೂ ಇದೆ.
ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಹೊಸ ಕಾರ್ಮಿಕ ಯೋಜನೆಗಳ ಕಾರ್ಮಿಕರಿಗೆ ಅಪಘಾತ ವಿಮೆ, ಆಸ್ಪತ್ರೆ ವೆಚ್ಚಕ್ಕೆ ಸಹಾಯ, ಅಪಘಾತ ಹಾಗೂ ಸಹಜ ಮರಣಕ್ಕೆ ಸಹಾಯ, ಮೃತ ಕಾರ್ಮಿಕ ಕುಟುಂಬಕ್ಕೆ ಸಹಾಯ ಮಾಡಲಾಗುತ್ತಿದೆ.ಸಾರಿಗೆ ಮತ್ತು ಅದಕ್ಕೆ ಸಂಬಂಧಿಸಿದ ಕಾಮಿಕರಿಗೆ ಯೋಜನೆ ಮತ್ತು ಮಂಡಳಿ ಜಾರಿಗೆ ತರಲಾಗಿದೆ.ಸುಮಾರು 25ಲಕ್ಷ ಮಂದಿ ಇದಕ್ಕೆ ಸಂಬತಂಧಿಸಿದ ಕಾರ್ಮಿಕರಿದ್ದಾರೆಂದು ಗುರುತಿಸಲಾಗಿದೆ. ಗಿಗ್ ವರ್ಕರ್ಸ್ಗಾಗಿ ಪ್ರತ್ಯೇಕ ಕಾಯಿದೆ ಜಾರಿಗೆ ತರಲಾಗಿದೆ ಎಂದರು .

ಆಡಳಿತರೂಢ ಕಾಂಗ್ರೆಸ್ ಸರ್ಕಾರ ನೀಡಿದ ಪಂಚಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ ಕಾರ್ಮಿಕ ವರ್ಗಕ್ಕೇನೂ ಮಾಡದೆ ಇರೋದು ಬೇಸರದ ಸಂಗತಿ. ಕಾರ್ಮಿಕರ ಪರವಾಗಿ ಕಾಂಗ್ರೆಸ್ ಸರ್ಕಾರ ಸದಾ ಐದ್ಧಾವಿದೆ ಎಂದು ಸಂತೋಷ್ ಲಾಡ್ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...