Thursday, June 18, 2026
Thursday, June 18, 2026

DC Shivamogga ಜಿಎಸ್ ಟಿಯಿಂದ ಆಗುತ್ತಿರುವ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

Date:

DC Shivamogga ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್‌ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
ಬಹುತೇಕ ಡೀಲರ್‌ದಾರರು ಜಿಎಸ್‌ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ ಡೀಲರ್‌ದಾರರಿಗೆ ತುಂಬಾ ತೊಂದರೆಯಾಗುತ್ತಿದೆ. ಜಿಎಸ್‌ಟಿ ವ್ಯಾಪ್ತಿಯಲ್ಲಿ ವಾರ್ಷಿಕ 1 ಕೋಟಿ ರೂ. ವಹಿವಾಟು ನಡೆಸಲು ಅವಕಾಶ ಮಾಡಿಕೊಡಬೇಕು. ನಮಗೆ ಶೇ. 3ರಿಂದ 4ರಷ್ಟು ಮಾರ್ಜಿನ್ ಇದ್ದು, ವಾರ್ಷಿಕ ಒಂದು ಲಕ್ಷ ರೂ.ನಿಂದ ಎರಡು ಲಕ್ಷ ರೂ. ವರೆಗೆ ಆದಾಯ ಇರುತ್ತದದೆ. ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ಆರೋಗ್ಯ ಖರ್ಚು ಎಲ್ಲವನ್ನು ನಿರ್ವಹಣೆ ಮಾಡಬೇಕಿರುತ್ತದೆ. ಜಿಎಸ್‌ಟಿಯಲ್ಲಿ ಬರುವುದರಿಂದ ವೆಚ್ಚ ಭರಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳಾಗುತ್ತಿವೆ ಎಂದು ಮನವಿಯಲ್ಲಿ ತಿಳಿಸಿದರು.
DC Shivamogga ಈಗಾಗಲೇ ನಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಆರೋಗ್ಯ ವಿಮೆ, ಸರ್ಕಾರಿ ಸೌಲಭ್ಯಗಳ ಮತ್ತು ಕಾರ್ಮಿಕ ಕಾರ್ಡ್ಗಳಿಂದಲೂ ವಂಚಿತರಾಗಿದ್ದೇವೆ. ಎಲ್ಲ ಸಮಸ್ಯೆಗಳನ್ನು ಗಮನಿಸಿ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಸಂಘದ ಅಧ್ಯಕ್ಷ ಯುಕೆ ಪ್ರಕಾಶ್, ಸಹ ಕಾರ್ಯದರ್ಶಿ ಮೋಹನ್, ಖಜಾಂಚಿ ಕೆ ಕೆ ಚಂದ್ರಶೇಖರ್, ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್ ಎಂ ಸಿ, ನಾಗರಾಜ್, ಮಲ್ಲಿಕಾರ್ಜುನ್, ಜಲೀಲ್ ಸಾಬ್, ನವೀನ್, ರಾಘವೇಂದ್ರ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...