Friday, December 5, 2025
Friday, December 5, 2025

CM Siddaramaiah ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ‘ಮತಗಳ್ಳತನ” ಆರೋಪ, ಸೀಎಂ ಸಿದ್ಧರಾಮಯ್ಯನವರ ಪ್ರತಿಕ್ರಿಯೆ

Date:

CM Siddaramaiah ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು.

ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.

ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

CM Siddaramaiah ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ x ಖಾತೆಯ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...