Sunday, November 1, 2026
Sunday, November 1, 2026

S. N. Channabasappa ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸಮಸ್ಯೆಗಳ ಬಗ್ಗೆ ಶಾಸಕರಿಂದ ಪರಿಶೀಲನಾ ಸಭೆ

Date:

S. N. Channabasappa ಸರ್ಕಾರಿ ವಸತಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ, ದೂರದ ಊರಿನಿಂದ ವ್ಯಾಸಂಗಕ್ಕಾಗಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರಿಗೆ ಎದುರಾಗುತ್ತಿರುವ ವಸತಿ ಹಾಗೂ ಆಹಾರ ವ್ಯವಸ್ಥೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಸಭೆ ನಡೆಸಿ, ಹಲವಾರು ವಿಷಯಗಳನ್ನು ಚರ್ಚಿಸಿದರು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು:

  1. ಹಲವಾರು ವಿದ್ಯಾರ್ಥಿನಿಯರು ಹತ್ತಾರು ಕಿಲೋಮೀಟರ್ ದೂರದಿಂದ ವಿದ್ಯಾಭ್ಯಾಸಕ್ಕಾಗಿ ಆಗಮಿಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ವ್ಯವಸ್ಥೆಯನ್ನು ವಿಸ್ತರಿಸಿ, ದೈನಂದಿನ ವಸತಿ ಹಾಗೂ ಆಹಾರ ವ್ಯವಸ್ಥೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
  2. ವಿದ್ಯಾರ್ಥಿನಿಯರಲ್ಲಿ ಬಹುಪಾಲು ಆರ್ಥಿಕವಾಗಿ ಹಿಂದುಳಿದ ಹಿನ್ನಲೆಯಲ್ಲಿ, ಹಾಸ್ಟೆಲ್ ಅರ್ಹತಾ ಮಾನದಂಡಗಳನ್ನು ಮರುಪರಿಶೀಲಿಸಿ, ಅಗತ್ಯವಿರುವ ವಿದ್ಯಾರ್ಥಿನಿಯರಿಗೆ ತ್ವರಿತವಾಗಿ ಸೌಲಭ್ಯ ಒದಗಿಸಬೇಕು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಪೋಷಕರ ಮಕ್ಕಳಿಗೆ ಆಧಿಕ್ಯ ನೀಡಬೇಕೆಂದು ತಿಳಿಸಿದರು.
  3. ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಯಾವುದೇ ಕಾರಣಕ್ಕೂ ವ್ಯತ್ಯಯ ಉಂಟಾಗದಂತೆ ಬಿಸಿಎಂ ಇಲಾಖೆ ತಕ್ಷಣ ಸ್ಪಂದಿಸಿ ವ್ಯವಸ್ಥೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಸೂಚಿಸಿದರು.

S. N. Channabasappa ಈ ಸಂದರ್ಭದಲ್ಲಿ ಬಿಸಿಎಂ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಶ್ರೀಮತಿ ಶೋಭಾ, ಬಿಸಿಎಂ ತಾಲೂಕು ಮಟ್ಟದ ಅಧಿಕಾರಿಗಳಾದ ಶ್ರೀ ಪವಿತ್ರಾನಂದರಾಜು, ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ರವಿ ನಾಯಕ್ ಡಿ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...