Keladi Shivappa Nayaka University ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.14 ರಂದು ಕೊನೆಯ ದಿನಾಂಕವಾಗಿದೆ. 20 ವರ್ಷ ಮೇಲ್ಪಟ್ಟ ಎಸ್‌ಎಸ್‌ಎಲ್‌ಸಿ ಪಾಸ್ ಆದರಿಗೆ ಅವಕಾಶ ನೀಡಲಾಗಿದ್ದು, ವಿಶ್ವವಿದ್ಯಾಲಯದ ವೆಬ್‌ಸೈಟ್ www.uahs.edu.in ಮೂಲಕ ಅರ್ಜಿ ಪಡೆದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿವಮೊಗ್ಗ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200 ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಇರುತ್ತದೆ.
Keladi Shivappa Nayaka University ಕೋರ್ಸ್ ಎರಡು ಸೆಮಿಸ್ಟರ್‌ಗಳಲ್ಲಿ ನಡೆಯಲಿದ್ದು, 20 ಸಾವಿರ ರೂ. ವಿದ್ಯಾರ್ಥಿ ಶುಲ್ಕವಿರುತ್ತದೆ. ಅರ್ಜಿ ಸಲ್ಲಿಸುವರು ರಾಷ್ಟಿçÃಕೃತ ಬ್ಯಾಂಕ್‌ನಲ್ಲಿ Comptroller, KSNUAHS, Iruvakki, Shivamogga-577412 payable at Shivamogga ಇವರ ಹೆಸರಿನಲ್ಲಿ ಡಿಡಿ ತೆಗೆದು ಅರ್ಜಿಯನ್ನು ಸಲ್ಲಿಸಬೇಕೆಂದು ವಿಶ್ವವಿದ್ಯಾಲಯದ ಸಂಯೋಜಕರು ತಿಳಿಸಿದ್ದಾರೆ.
Keladi Shivappa Nayaka University ಕೃಷಿಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
Date:
