Karnataka Arya Vaishya Community Development Corporation ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ದಿಂದ 35 ವರ್ಷ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತರು ವೆಬ್‌ಸೈಟ್ www.kacdc.karnataka.gov.in ರಲ್ಲಿ ದಿ: 31/10/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 08182-229634 ನ್ನು ಅಥವಾ ಹಾಗೂ ಕ್ಯೂಆರ್ ಕೋಡ್ ಬಳಸಿ ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.
Karnataka Arya Vaishya Community Development Corporation ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯವೈಶ್ಯ ನಿಗಮದಿಂದ ಅರ್ಜಿ ಆಹ್ವಾನ
Date:
