Thursday, September 17, 2026
Thursday, September 17, 2026

CM Siddharamaiah ಬೆಂಗಳೂರು ವಿಕ್ಟೋರಿಯ ಆಸ್ಪತ್ರೆಯನ್ನ 300 ಹಾಸಿಗೆಗಳ ಹಂತಕ್ಕೆ ಹೆಚ್ಚಿಸುವ ಪ್ರಸ್ತಾವನೆ ಇದೆ – ಸಿದ್ಧರಾಮಯ್ಯ

Date:

CM Siddharamaiah ಸಿಎಂ ಸಿದ್ದರಾಮಯ್ಯನವರು ಮಳೆ ಕಾರಣದಿಂದ ಕೊಪ್ಪಳದ ಕಾರ್ಯಕ್ರಮಕ್ಕೆ ಹೋಗಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ, ಆದರೂ ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು, ಯಾರ ಬಳಿಯೂ ಹಣ ಪಡೆಯಬಾರದು ಎಂದು ಸೂಚಿಸಿದರು.

ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು.
ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದರು.

CM Siddharamaiah ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆ. ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು.

120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...