Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮ ಮತ್ತು ಕೊರಚ ಸಮಾಜ ಶಿವಮೊಗ್ಗ ಇವರ ಸಂಯುಕ್ತಶ್ರಾಯದಲ್ಲಿ ಆಗಸ್ಟ್ 09 ರಂದು ಬೆಳಿಗ್ಗೆ 11.00 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಉದ್ಘಾಟನೆಯನ್ನು ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು.
Department of Kannada and Culture ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎಸ್. ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು ಭಾಗವಹಿಸುವರು.
ಸಮಾಜದ ಮುಖಂಡರಾದ ಅನಿಲ್ ಕುಮಾರ್ ಲಕ್ಕಿನಕೊಪ್ಪ ಇವರು ವಿಶೇಷ ಉಪನ್ಯಾಸವನ್ನು ನೀಡುವರು.
