Monday, August 24, 2026
Monday, August 24, 2026

B.Y. Raghavendra ತಮ್ಮಡಿಹಳ್ಳಿ ಪ್ರದೇಶದಲ್ಲಿ ರಾಷ್ಟ್ರೀಯ ರಕ್ಷಾ ವಿವಿ ಸ್ಥಾಪಿಸಲು ಸ್ಥಳ ಮಂಜೂರಾತಿ ಆಗಿದೆ. ಮೂಲಭೂತ ಸೌಕರ್ಯಗಳಿಗೆ ಅನುದಾನಕ್ಕೆ ಬಿ.ವೈ.ರಾಘವೇಂದ್ರ ಮನವಿ

Date:

B.Y. Raghavendra ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ದೆಹಲಿಯಲ್ಲಿ ಶ್ರೀ ಅಮಿತ್ ಷಾ ಜೀಯವರನ್ನು ಭೇಟಿ ಮಾಡಿ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದರು.
B.Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ತಾಲ್ಲೂಕು ತಮ್ಮಡಿಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು 22 ಎಕರೆ 19 ಗುಂಟೆ ಜಾಗವು ಮಂಜೂರಾಗಿದ್ದು, ಸದರಿ ಜಾಗದಲ್ಲಿ ಖಾಯಂ ಆಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಲು ಅನುಕೂಲವಾಗುವಂತೆ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ, ವಸತಿ ಗೃಹಗಳು, ಕಾಂಪೌಂಡ್ ನಿರ್ಮಾಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಸೂಕ್ತ ಅನುದಾನವನ್ನು ನೀಡುವಂತೆ ಕೋರಿಕೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...