CM Siddaramaiah ಬಿಜೆಪಿಯವರು ಯಾವತ್ತೂ ಜನರ ಆಶೀರ್ವಾದ ಪಡೆದುಕೊಂಡು ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರೋಧವಾದ ನೀತಿಯನ್ನು ಅನುಸರಿಸಿ ಅಧಿಕಾರಕ್ಕೆ ಬಂದದ್ದು.
ಕೇಂದ್ರ ಸರ್ಕಾರ ನಮ್ಮೊಂದಿಗೆ ಸಹಕರಿಸುತ್ತಿಲ್ಲ. ತೆರಿಗೆ ಪಾಲನ್ನೂ ಸರಿಯಾಗಿ ಕೊಡುತ್ತಿಲ್ಲ. ಎಂದು ಮೈಸೂರಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಇನ್ನಾದರೂ ಕೇಂದ್ರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಧ್ವನಿ ಎತ್ತಲಿ
ಎಂದು ಸಿದ್ಧರಾಮಯ್ಯನವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಯೊಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.
