CM Siddharamaiah 2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಪೂರ್ಣಗೊಳಿಸಿ, 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ವಿವಿಧೆಡೆ ಆಯೋಜಿಸಿದ್ದ ಸಮಾರಂಭಗಳಲ್ಲಿ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿ, ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಉದ್ಘಾಟಿಸಿ. ಮೆಟ್ರೋ 3ನೇ ಹಂತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿಗಳು ಮಾತನಾಡಿದರು .
ಮೆಟ್ರೋ ನಿಲ್ದಾಣಗಳ ನಿರ್ಮಾಣದಲ್ಲಿ ಇನ್ಫೋಸಿಸ್ ಫೌಂಡೇಶನ್, ಬಯೋಕಾನ್ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ನಂತಹ ಖಾಸಗಿ ಸಂಸ್ಥೆಗಳು ಕೈಜೋಡಿಸಿವೆ. ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವ ಮುಂದಿನ ದಿನಗಳಲ್ಲಿ ಇನ್ನಷ್ಟು ಸದೃಢಗೊಳ್ಳುವ ವಿಶ್ವಾಸ ನನಗಿದೆ.
CM Siddharamaiah ನಮ್ಮ ರಾಜ್ಯವು ದೇಶದ ಐಟಿ ರಫ್ತಿನಲ್ಲಿ ಶೇ.35-40 ರಷ್ಟು ಕೊಡುಗೆ ಕೊಡುತ್ತಿದೆ. ಇದರಲ್ಲಿ ಬೆಂಗಳೂರಿನ ಪಾಲು ದೊಡ್ಡದು. ಎಲೆಕ್ಟ್ರಾನಿಕ್ಸ್ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯ ರಫ್ತಿನಲ್ಲಿ ಶೇ.40 ಕ್ಕೂ ಹೆಚ್ಚಿನ ಪಾಲು ರಾಜ್ಯದ್ದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು 1.35 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಯೋಜನೆಗಳನ್ನು ರೂಪಿಸಿ ಸಂಪನ್ಮೂಲಗಳನ್ನು ವಿನಿಯೋಗಿಸಿ ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಅನೇಕ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ದೇಶದ ಆರ್ಥಿಕತೆಗೆ ಬೃಹತ್ ಕೊಡುಗೆ ಕೊಡುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರವೂ ಸಹ ಕೈ ಜೋಡಿಸಬೇಕೆಂದು ವಿನಂತಿಸುತ್ತೇನೆ ಎಂದು ಸಿದ್ಧರಾಮಯ್ಯ ಅವರು ಪ್ರಧಾನಿ ಮೋದಿ ಅವರ ಗಮನ ಸೆಳೆಯುವಂತೆ ಮಾತನಾಡಿದರು.
