Shivamogga Police ಶಿವಮೊಗ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿಪುರ 4ನೇ ಕ್ರಾಸ್ ವಾಸಿ ನಾರಾಯಣ ಬಿನ್ ರಾಮಸ್ವಾಮಿ ಎಂಬುವವರು ಜು 07 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈತನ ಚಹರೆ 5 ಅಡ ಎತ್ತರ, ಕೋಲು ಮುಖ, ಗೋಧಿ ಮೈಬ್ಬಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಕೈ ಮೇಲೆ ರಾಧಮ್ಮ ಎಂಬ ಹಚ್ಚೆ ಗುರುತು ಇದೆ. ಕನ್ನಡ ಮಾತಾನಾಡುತ್ತಾರೆ.
ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟೀಶರ್ಟ್, ಕಪ್ಪು ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಸುಳಿವು ದೊರೆತಲ್ಲಿ ಕೋಟೆ ಪೊಲೀಸ್ ಠಾಣೆ, ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.
