Morarji Desai Residential 2025-26 ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿ ತಾಲ್ಲೂಕು ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Morarji Desai Residential ಪಿಸಿಎಂಬಿ ಕೋರ್ಸ್ನಲ್ಲಿ ಒಟ್ಟು 40 ಸೀಟ್ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಆ.16 ಕೊನೆಯ ದಿನಾಂಕವಾಗಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್‌ಎಟಿಎಸ್ ನಂ, ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಅಥವಾ ಆದಾಯ ಪ್ರಮಾಣ ಪತ್ರ ನಕಲುಪ್ರತಿ, ಪೋಷಕರು ಅಥವಾ ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9535636963 ಗೆ ಸಂಪರ್ಕಿಸಬಹುದೆAದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಿ ಮಲ್ಲೇಶಪ್ಪ ತಿಳಿಸಿದ್ದಾರೆ.
Morarji Desai Residential ಆನವೇರಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜಿಗೆ ಪ್ರವೇಶಾತಿ
Date:
