Guarantee Scheme ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು ಇನ್ನೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ತಿಳಿಸಿದರು.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅರ್ಹರನ್ನು ತಲುಪಲು ಅಧಿಕಾರಿಗಳು ಸೇರಿದಂತೆ ಎಲ್ಲರೂ ಸಹಕರಿಸಬೇಕು. ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ ಎಂದರು.
ಜಿಲ್ಲಾ ಮಟ್ಟದ ಉಪಾಧ್ಯಕ್ಷರಾದ ಶಿವಣ್ಣ ಹಾಗೂ ಸದಸ್ಯರಾದ ಶಿವಾನಂದ್ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ರಚನೆಯಾಗುವ ಜಾಗೃತಿ ಸಮಿತಿ ಸದಸ್ಯರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅವರ ಪಾತ್ರವೇನು ಎಂದು ಪ್ರಶ್ನಿಸಿದ ಅವರು ಸಮಿತಿ ಸದಸ್ಯರ ಹೆಸರನ್ನು ಹಾಗೂ ಕುಂದು ಕೊರತೆಗಳ ಬಗ್ಗೆ ಸಾರ್ವಜನಿಕರು ದೂರು ನೀಡಲು ಆಹಾರ ಇಲಾಖೆಯ ಉಚಿತ ಟೋಲ್‌ಫ್ರೀ ಸಂಖ್ಯೆಯನ್ನು ಸಹ ಪ್ರತಿ ನ್ಯಾಯ ಬೆಲೆ ಅಂಗಡಿಯಲ್ಲಿ ಬರೆಸಬೇಕು ಎಂದರು.
ಉಪಾಧ್ಯಕ್ಷರು ಮತ್ತು ಸದಸ್ಯರು ಮಾತನಾಡಿ, ಸಾಗರ, ತೀರ್ಥಹಳ್ಳಿಗೆ ಬಸ್ ಬಿಡಲು ಕೇಳಿಕೊಂಡಿದ್ದೆವು. ಹಲವೆಡೆ ಸಿಟಿ ಬಸ್ ಬಿಡುವ ಬಗ್ಗೆಯೂ ಕೆಎಸ್‌ಆರ್‌ಟಿಸಿ ಕ್ರಮ ವಹಿಸಿಲ್ಲ. ಶಕ್ತಿ ಯೋಜನೆ ಕುರಿತು ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.
ಗೃಹಲಕ್ಷಿö್ಮ ಯೋಜನೆಯಡಿ ಐಟಿ/ಜಿಎಸ್‌ಟಿ ಪೇಯೀ ಎಂದು ಸ್ಟೇಟಸ್ ತೋರಿಸುತ್ತಿರುವವರಿಗೆ ಈ ಸೌಲಭ್ಯ ದೊರೆಯುತ್ತಿಲ್ಲ. ಐಟಿ/ಜಿಎಸ್‌ಟಿ ಪಾವತಿ ಮಾಡುತ್ತಿಲ್ಲವೆಂದು ಹಿಂಬರಹ ನೀಡಿದರೂ ಪರಿಗಣಿಸುತ್ತಿಲ್ಲ. ಈ ಬಗ್ಗೆ ಸಭೆಯಲ್ಲಿ ನಿರ್ಣಯ ಮಾಡಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.
ಸೊರಬ ತಾಲ್ಲೂಕು ಸಮಿತಿ ಸದಸ್ಯರು ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಒಂದು ವಾರವಷ್ಟೇ ಪಡಿತರ ವಿತರಣೆಯಾಗುತ್ತಿದ್ದು ಕೂಲಿ ಕೆಲಸಕ್ಕೆ ಹೋಗುವವರಿಗೆ ಪಡಿತರ ಪಡೆಯಲು ಕಷ್ಟವಾಗುತ್ತಿದೆ. 15 ದಿನವಾದರೂ ಪಡಿತರ ನೀಡುವಂತೆ ಆಗಬೇಕೆಂದರು.
Guarantee Scheme ಶಿವಮೊಗ್ಗ ತಾಲ್ಲೂಕು ಸಮಿತಿ ಅಧ್ಯಕ್ಷ ಹೆಚ್ ಎಂ ಮಧು ಮಾತನಾಡಿ, ತಾಲ್ಲೂಕು ಮಟ್ಟದ ಸಭೆಗೆ ಮೆಸ್ಕಾಂ ಅಧಿಕಾರಿಗಳು ಹಾಜರಾಗುತ್ತಿಲ್ಲ. ತಾಲ್ಲೂಕು ಸಮಿತಿ ಸಭೆಗೆ ಸಂಬAಧಿಸಿದ ಎಲ್ಲ ಅಧಿಕಾರಿಗಳು ಬರಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 401790 ಮಹಿಳೆಯರು ಅಂದರೆ ಶೇ.94.63 ನೋಂದಣಿಯಾಗಿದ್ದು, ಜೂನ್ ಮಾಹೆವರೆಗೆ ರೂ.308416 ಮಹಿಳೆಯರಿಗೆ ಹಣ ಪಾವತಿಯಾಗಿದೆ ಎಂದು ತಿಳಿಸಿದರು.
ಆಹಾರ ಇಲಾಖೆಯ ಉಪನಿರ್ದೇಶಕರಾದ ಅವಿನ್ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿಯಿಂದ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 1368324 ಜನರು ನೋಂದಣಿಯಾಗಿದ್ದು ಈವರೆಗೆ ಯೋಜನೆಯಡಿ 360.54 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಶಕ್ತಿ ಯೋಜನೆಯಡಿ ಜಿಲ್ಲೆಯಿಂದ ಈವರೆಗೆ 52977358 ಮಹಿಳಾ ಪ್ರಯಾಣಿಕರು ಅಂದರೆ ಶೇ.63.0 ರಷ್ಟು ಫಲಾನುಭವಿಗಳು ಉಚಿತವಾಗಿ ಪ್ರಯಾಣ ಮಾಡಿದ್ದು ನಿಗಮಕ್ಕೆ ರೂ.3797.98 ಕೋಟಿ ಆದಾಯ ಲಭಿಸಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿ ರಾಮಚಂದ್ರ ತಿಳಿಸಿದರು.
ಮೆಸ್ಕಾಂ ಅಧಿಕಾರಿ ಮಾತನಾಡಿ, ಗೃಹಜ್ಯೋತಿ ಯೋಜನೆಯಡಿ ಈವರೆಗೆ 469298 ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು ಸರ್ಕಾರ ಒಟ್ಟು ರೂ.48104.25 ಕೋಟಿ ವೆಚ್ಚ ಮಾಡಿದೆ ಎಂದು ತಿಳಿಸಿದರು.
ಉದ್ಯೋಗಾಧಿಕಾರಿ ಖಲಂದರ್ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಈವೆರೆಗೆ ಒಟ್ಟು 6894 ಫಲಾನುಭವಿಗಳು ನೋಂದಣಿಯಾಗಿದ್ದು ರೂ.5,59,29,000/- ಗಳನ್ನು ಪಾವತಿಸಲಾಗಿದೆ ಎಂದರು.
ಯುವನಿಧಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳು ನೋಂದಣಿಯಾಗಲು ಪ್ರೇರೇಪಿಸುವ ಪೋಸ್ಟರ್‌ನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
Guarantee Scheme ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿಜಾರಿಮಾಡಲು ಅಧಿಕಾರಿಗಳು ಸಹಕರಿಸಿ- ಸಿ.ಎಸ್.ಚಂದ್ರಭೂಪಾಲ್
Date:
