Department of Youth Empowerment and Sports ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆ.16 ರ ಬೆಳಿಗ್ಗೆ 10.30 ಕ್ಕೆ ನಗರ ನೆಹರು ಕ್ರೀಡಾಂಗಣದಲ್ಲಿ 2025-26 ನೇ ಸಾಲಿನ ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಭದ್ರವಾತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳು ಅಭಿವೃದ್ದಿ ನಿಗಮ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಇವರ ಗೌರವ ಉಪಸ್ಥಿತಿ ಇರಲಿದೆ.
Department of Youth Empowerment and Sports ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪಾಲ್ಗೊಳ್ಳುವರು, ಜನಪ್ರತಿನಿಧಿಗಳು, ಅಧಿಕಾರಿಗಳು, ಕ್ರೀಡಾಪಟುಗಳು ಪಾಲ್ಗೊಳ್ಳುವರು.
Department of Youth Empowerment and Sports ಆಗಸ್ಟ್16. ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
Date:
