Friday, December 5, 2025
Friday, December 5, 2025

Kateel Ashok Pai Memorial College ಗಾಂಧೀಜಿ & ಇತರ ಹೋರಾಟಗಾರರ ತ್ಯಾಗದಿಂದ ಬಂದ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು- ಡಾ.ಸಂಧ್ಯಾ ಕಾವೇರಿ

Date:

Kateel Ashok Pai Memorial College ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಶಿವಮೊಗ್ಗ, ಇವರ ವತಿಯಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಐ ಕ್ಯೂ ಎ ಸಿ ಸಹಯೋಗದಲ್ಲಿ 79 ನೇ
ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ನೆರವೇರಿಸಿದ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿಯವರು ಮಾತನಾಡಿ,
ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹನೀಯರೆಲ್ಲರನ್ನು ನಾವೆಲ್ಲರೂ ನೆನಪಿಸಿ
ಕೊಳ್ಳಬೇಕಾದ ಸುದಿನವಿದು ಮಹಾತ್ಮ ಗಾಂಧೀಜಿ ಸೇರಿದಂತೆ ಹಲವು ಮಹನೀಯರ ತ್ಯಾಗ ಬಲಿದಾನ
ಹಾಗೂ ಹೋರಾಟದ ಫಲವೇ ಸ್ವಾತಂತ್ರ್ಯ. ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ
ಮಾರ್ಗದಲ್ಲಿ ತಂದುಕೊಟ್ಟ ಈ ಸ್ವಾತಂತ್ರ್ಯವನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು, ಪ್ರತಿ
ಸ್ವಾತಂತ್ರೋತ್ಸವವು ಕೂಡ ಸಂಕಲ್ಪದ ಹೆಜ್ಜೆಗಳಾಗಬೇಕು ಕಟೀಲ್ ಅಶೋಕ್ ಪೈ ಸಮೂಹ ಸಂಸ್ಥೆಗಳು ಈ
ಸಂಕಲ್ಪದ ಭಾಗವಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಈ ಸಂಧರ್ಭದಲ್ಲಿ ಈ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು
ಕೆಲವು ದೃಢಸಂಕಲ್ಪವನ್ನು ಮಾಡುವುದರ ಮೂಲಕ ¸ ಮಾಜಮುಖಿ ಯೋಚನೆ ಮತ್ತು ಯೋಜನೆಗಳಿಂದ
ಈ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಭಾರತವು ಜಾಗತಿಕವಾಗಿ ನಡೆಯುತ್ತಿರುವ ಯುದ್ಧಗಳಲ್ಲಿ
ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಕಾರಣಕ್ಕೂ ಭಾಗಿಯಾಗದಿರಲಿ ಎಂದು ಹಾರೈಸೋಣ.
ಜಗತ್ತಿನೆಲ್ಲೆಡೆ ಶಾಂತಿ ನೆಮ್ಮದಿ ನೆಲೆಗೊಳ್ಳಲಿ ಯುದ್ಧದ ಕಾರ್ಮೋಡ ಹಿಂದೆ ಸರಿಯಲಿ ಈ
ಸ್ವಾತಂತ್ರ್ಯೋತ್ಸವ ನಮ್ಮೆಲ್ಲರಲ್ಲೂ ಉತ್ಸಾಹವನ್ನು ಇಮ್ಮಡಿಗೊಳಿಸಲಿ ಎಂದು ಆಶಿಸಿದರು.

ಈ ಸಂಧರ್ಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಉಪನ್ಯಾಸಕರು ಹಾಗೂ
ಸಿಬ್ಬಂದಿವರ್ಗದವರು ಪುಷ್ಪ ಸಮರ್ಪಣೆಯನ್ನು ನೆರವೇರಿಸಿದರು.
Kateel Ashok Pai Memorial College ಶೈಕ್ಷಣಿಕ ನಿರ್ದೇಶಕರಾದ ಪ್ರೊ. ರಾಜೇಂದ್ರ ಚೆನ್ನಿ, ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ ಹಾಗೂ ಐ ಕ್ಯೂ ಎ ಸಿ ಸಂಯೋಜಕರಾದ ಡಾ. ಅರ್ಚನಾ ಭಟ್ ರಾಷ್ಟ್ರೀಯ ಸೇವಾ ಯೋಜನೆಯ
ಘಟಕ-೧,೨ ರ ಕಾರ್ಯಕ್ರಮಾಧಿಕಾರಿಗಳಾದ ಡಾ. ಸುಕೀರ್ತಿ ಹಾಗೂ ಮೋಹನ್ ಕುಮಾರ್. ಆರ್.
ಉಪಸ್ಥಿತರಿದ್ದರು. ಕು. ತನ್ಮಯಿ ಕಾರ್ಯಕ್ರಮವನ್ನು ನಿರೂಪಿಸಿದರು.

ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...