Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆ ಹಾಗೂ ಸಸ್ಯ ರೋಗಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ, ಇರುವಕ್ಕಿ ಇವರ ಸಹಯೋಗದೊಂದಿಗೆ ” ಅಡಿಕೆ ಬೇಸಾಯ, ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್ ನ ಎರಡನೇ ಮಹಡಿ, ಇರುವಕ್ಕಿ ಯಲ್ಲಿ ದಿನಾಂಕ:18.08.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.
ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.
Keladi Shivappa Nayaka University of Agricultural ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978
