Monday, September 21, 2026
Monday, September 21, 2026

Public Library Department 2022 ರಲ್ಲಿ ಪ್ರಥಮ ಆವೃತ್ತಿಯಾಗಿ ಮುದ್ರಿಸಿದ ಪುಸ್ತಕಗಳ ಆಯ್ಕೆ/ ಆಯ್ಕೆಯಾಗದ ಪಟ್ಟಿ ಗ್ರಂಥಾಲಯ ಇಲಾಖೆಯಿಂದ ಪ್ರಕಟ

Date:

Public Library Department ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2022ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಯಲ್ಲಿ ಮತ್ತು ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಆಯುಕ್ತರು, ಸಾರ್ವಜನಿಕರ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಆ.30ರೊಳಗಾಗಿ ಸಲ್ಲಿಸುವಂತೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ಇವರು ತಿಳಿಸಿದ್ದಾರೆ.

Public Library Department ಈ ಪುಸ್ತಕಗಳ ಪ್ರದರ್ಶನವನ್ನು ಆ.20 ರಿಂದ 22 ವರೆಗೆ ಡಾ. ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ.ಬಡಾವಣೆ, ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ, ವಿಜಯನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...