Sri Adichunchanagiri Mahasansthan Math ಒಬ್ಬ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕನು ಕೇವಲ ಕ್ರೀಡಾ ಚಟುವಟಿಕೆಗಳನ್ನು ಕಲಿಸುವುದಲ್ಲದೆ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತಾನೆ. ಅವರು ವಿದ್ಯಾರ್ಥಿಗಳಲ್ಲಿ ದೈಹಿಕ ಚಟುವಟಿಕೆಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಮತ್ತು ಜೀವನದುದ್ದಕ್ಕೂ ಅದನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತಾರೆ.
ಒಬ್ಬ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕನು ಕೇವಲ ವಿದ್ಯಾರ್ಥಿಗಳ ದೈಹಿಕ ಆರೋಗ್ಯವನ್ನು ಸುಧಾರಿಸುವುದಿಲ್ಲ, ಆದರೆ ಅವರ ಆತ್ಮವಿಶ್ವಾಸ, ನಾಯಕತ್ವದ ಗುಣಗಳು ಮತ್ತು ಶಿಸ್ತನ್ನು ಬೆಳೆಸಲು ಸಹಾಯ ಮಾಡುತ್ತಾನೆ. ಆದ್ದರಿಂದ ಜಿಲ್ಲೆಯ ನಿವೃತ್ತಿ ಹೊಂದಿದ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರ ಸೇವೆಯನ್ನು ಪರಿಗಣಿಸಿ, ಈ ವರ್ಷವೂ ಸಹ ಕ್ರೀಡಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಚುಂಚಾದ್ರಿ ಕಪ್ ಸಮಾರೋಪ ಸಮಾರಂಭದ ಕಾರ್ಯಕ್ರಮದಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ, ಬೆಕ್ಕಿನಕಲ್ಮಠದ ಪೂಜ್ಯ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ, ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್, ಕಾರ್ಯದರ್ಶಿ ಕೆ.ಎಸ್. ಶಶಿ ಹಾಗೂ ಅತಿಥಿ ಗಣ್ಯರಿಂದ ಸನ್ಮಾನಿಸಿ, ಗೌರವಿಸಲಾಯಿತು.
Sri Adichunchanagiri Mahasansthan Math ಮಕ್ಕಳಲ್ಲಿನ ನಾಯಕತ್ವ ಗುಣ & ಆತ್ಮ ವಿಶ್ವಾಸವನ್ನ ದೈಹಿಕ ಶಿಕ್ಷಕ ಬೆಳೆಸಲು ಸಹಕರಿಸುತ್ತಾನೆ – ಶ್ರೀಪ್ರಸನ್ನನಾಥಶ್ರೀ
Date:
