Employment Dairy Farming Scheme ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2052-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ಹೈನುಗಾರಿಕೆ ಯೋಜನೆ,ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಬಿ ಸಾರಥಿ ವಾಹನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಿಗೆ ಆಸಕ್ತ ಫಲಾಪೇಕ್ಷಿಗಳು ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.17 ಕೊನೆಯ ದಿನವಾಗಿರುತ್ತದೆ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-276776 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
