Thursday, June 18, 2026
Thursday, June 18, 2026

Canara Bank Rural Self Employment Training Institute ಸಿಸಿ ಟಿವಿ ಅಳವಡಿಕೆ, ನಿರ್ವಹಣೆ , ಸರ್ವೀಸಿಂಗ್ ಬಗ್ಗೆ ಉಚಿತ ತರಬೇತಿ ಮಾಹಿತಿ

Date:

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆ. 08 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿ ಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 08 ರ ಸೋಮವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Canara Bank Rural Self Employment Training Institute ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂ. ಸಂ. 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...