Thursday, June 18, 2026
Thursday, June 18, 2026

Department of Empowerment of Persons with Disabilities and Senior Citizens 2025-26 ನೇ ಸಾಲಿಗೆ ಫಲಾನುಭವಿ ಆಧಾರಿತ ಯೋಜನೆಗಳ ಲಾಭ ಪಡೆಯಲು ವಿಕಲಚೇತನರಿಂದ ಆನ್ಲೈನ್ ಅರ್ಜಿ ಆಹ್ವಾನ

Date:

Department of Empowerment of Persons with Disabilities and Senior Citizens 2025-26 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯಡಿ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ ತಂತ್ರಾಂಶದಡಿ ನೀಡಲು ವಿಕಲಚೇತನರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನಾಂಕವಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿ ದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವೀಲ್‌ಚೇರ್ ಯೋಜನೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

Department of Empowerment of Persons with Disabilities and Senior Citizens ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು/ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರುಗಳಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ-998015110/8746997896, ಭದ್ರಾವತಿ-7899137243, ಶಿಕಾರಿಪುರ-9741161346, ತೀರ್ಥಹಳ್ಳಿ-9480767638, ಸಾಗರ-9535247754,ಸೊರಬ-9110493122, ಹೊಸನಗರ-9731922693 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...