Department of Industrial Training and Employment ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ಆ.28 ರ ಬೆಳಿಗ್ಗೆ 10.30ಕ್ಕೆ ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
Department of Industrial Training and Employment ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ವೈಜಗೋಂಡ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕಾಳಿದಾಸ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದು, ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆಯ ಆಯುಕ್ತರಾದ ಡಾ.ರಾಗಪ್ರಿಯಾ ಆರ್, ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆಯ ನಿರ್ದೇಶಕರಾದ ಎನ್.ಎಸ್.ಚಿದಾನಂದ ಇವರ ಘನ ಉಪಸ್ಥಿತಿ ಇರಲಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
Department of Industrial Training and Employment ಆಗಸ್ಟ್ 28 , ಜಿಲ್ಲಾಮಟ್ಟದ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ
Date:
