S. N. Channabasappa ಇಂದು ಮೇಜರ್ ಧ್ಯಾನ್‌ಚಂದ್ ರವರ ಜಯಂತಿಯ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಮತ್ತು ‘ಸಂಸದ್ ಕ್ರೀಡಾ ಮಹೋತ್ಸವ’ವನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಉದ್ಘಾಟಿಸಿದರು.
ಭಾರತ ಹೋಕಿಯ ಜಾದುಗಾರರಾದ ಮೇಜರ್ ಧ್ಯಾನ್‌ಚಂದ್ ಅವರ ತ್ಯಾಗ, ಶ್ರಮ ಮತ್ತು ದೇಶಕ್ಕಾಗಿ ನೀಡಿದ ಅಪಾರ ಕೊಡುಗೆಯನ್ನು ಸ್ಮಸ್ಮರಿಸಿ, ಅವರ ಜೀವನವೇ ಕ್ರೀಡೆಯ ಮಾದರಿ, ಶಿಸ್ತಿನ ಪಾಠ ಮತ್ತು ರಾಷ್ಟ್ರಭಕ್ತಿಯ ಸಂಕೇತವಾಗಿದೆ ಎಂದು ತಿಳಿಸಲಾಯಿತು.
S. N. Channabasappa ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ಖೇಲೋ ಇಂಡಿಯಾ’ ಮತ್ತು ‘ಫಿಟ್ ಇಂಡಿಯಾ’ ಕಾರ್ಯಕ್ರಮದ ಸ್ಫೂರ್ತಿಯಿಂದ, ಯುವಕರಲ್ಲಿ ಆರೋಗ್ಯ, ಶಾರೀರಿಕ ಸಾಮರ್ಥ್ಯ ಹಾಗೂ ಕ್ರೀಡಾ ಚೇತನೆಯನ್ನು ಬೆಳೆಸುವ ಉದ್ದೇಶದಿಂದ ಈ ಕ್ರೀಡಾ ಮಹೋತ್ಸವ ಆಯೋಜನೆಗೊಂಡಿದ್ದು, ಇದು ನಮ್ಮ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯವನ್ನು ಮೆರೆದಿಡಲು ಒಳ್ಳೆಯ ವೇದಿಕೆ ಒದಗಿಸುತ್ತದೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ, ಶ್ರೀ ಡಿ ಎಸ್ ಅರುಣ್ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀಮತಿ ಸುರೇಖಾ ಮುರಳಿಧರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.
