Samanvaya Kashi ಸಮನ್ವಯ ಟ್ರಸ್ಟ್ನ ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಅವರಿಗೆ ಚಿಕ್ಕಮಗಳೂರಿನ ಐಸಿರಿ ಫೌಂಡೇಷನ್ ಸಂಸ್ಥೆಯು ಐಸಿರಿ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಿದೆ.
ಚಿಕ್ಕಮಗಳೂರಿನ ದೊಡ್ಡಕುರುಬರಹಳ್ಳಿಯಲ್ಲಿರುವ ಶ್ರೀ ಬಸವ ಮಂದಿರದಲ್ಲಿ ಶ್ರೀ ಬಸವತತ್ವ ಪೀಠ, ಐಸಿರಿ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಶಿವಾನುಭವ ಗೋಷ್ಠಿ, ಐಸಿರಿ ಸ್ಟೀಲ್ ಬ್ಯಾಂಕ್ ಲೋಕಾರ್ಪಣೆ, ಕೃತಿಗಳ ಲೋಕಾರ್ಪಣೆ ಹಾಗೂ ಐಸಿರಿ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಶಿ ಅವರನ್ನು ಸನ್ಮಾನಿಸಲಾಯಿತು.
ಚಿಕ್ಕಮಗಳೂರಿನ ಐಸಿರಿ ಫೌಂಡೇಷನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯಮಟ್ಟದ ಐವರು ಸಾಧಕರನ್ನು ಗುರುತಿಸಿ ಐಸಿರಿ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದೆ. ಸಮನ್ವಯ ಕಾಶಿ ಸೇರಿದಂತೆ ಐವರಿಗೆ ಐಸಿರಿ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎರಡು ದಶಕಗಳಿಂದ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಸಮನ್ವಯ ಟ್ರಸ್ಟ್ನ ಸಮನ್ವಯ ಕಾಶಿ ಅವರಿಗೆ ಐಸಿರಿ ಫೌಂಡೇಷನ್ ಸಂಸ್ಥೆಯು ರಾಜ್ಯಮಟ್ಟದ ಐಸಿರಿ ಸಾಧಕ ಪ್ರಶಸ್ತಿ ನೀಡಿ ಅಭಿನಂದಿಸಿತು.
Samanvaya Kashi ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ, ಐಸಿರಿ ಫೌಂಡೇಷನ್ ಅಧ್ಯಕ್ಷ ರೋಹನ್ ಭಾರ್ಗವಪುರಿ, ಶಾಸಕ ಎಚ್.ಡಿ.ತಮ್ಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.
