Saturday, December 6, 2025
Saturday, December 6, 2025

Karnataka State Govt ಸ್ಥಿರಾಸ್ತಿ ನೋಂದಣಿ ಶುಲ್ಕ ಮತ್ತೆ ಪರಿಷ್ಕರಿಸಿದ ರಾಜ್ಯ ಸರ್ಕಾರ

Date:

Karnataka State Govt ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ,31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ ,ನೋಂದಣಿ ಹಾಗೂ ಇತರೆ ಸೆಸ್ ಸೇರಿ
ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ.

ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು. ರಾಜ್ಯ ಸರ್ಕಾರವು ದಿನಾಂಕ: 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ ಶೇ.2 ರಷ್ಟು ಪರಿಷ್ಕರಿಸಿದೆ.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್‌ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

Karnataka State Govt ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...