Thursday, March 19, 2026
Thursday, March 19, 2026

Department of School Education, ಕ್ರೀಡೆಯಿಂದ ಶಿಸ್ತು ,ಏಕಾಗ್ರತೆ ಬೆಳೆಯುತ್ತದೆ- ಕ್ಲಿಫರ್ಡ್ ರೋಷನ್ ಪಿಂಟೊ

Date:

Department of School Education, ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಮೌಂಟ್ ಕಾರ್ಮೆಲ್ ಎಜುಕೇಶನ್ ಸೊಸೈಟಿ, ಕಾರ್ಯದರ್ಶಿಯಾದ ಕ್ಲಿಫರ್ಡ್ ರೋಷನ್ ಪಿಂಟೊ ಕ್ರೀಡಾಪಟುಗಳಿಗೆ ತಿಳಿಸಿದರು.

ಅವರು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಇನ್ ಫೆಂಟ್ ಜೀಸಸ್ ಶಾಲೆ, ಶರಾವತಿ ನಗರ, ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನ ಆಯೋಜಿಸಿದ್ದ 14 ವರ್ಷ ವಯೋಮಿತಿಯೊಳಗಿನ ಸಿ ಮತ್ತು ಡಿ ಬಾಲಕ ಮತ್ತು ಬಾಲಕಿಯರ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯವಾಗುತ್ತದೆ.

ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು – ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಚಂದ್ರಕಾಂತ್ . ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ಮನಸ್ಸು ಮತ್ತು ದೇಹದ ಬೆಳವಣಿಗೆಯು ಸಮಾನವಾಗಿ ಬೆಳೆಯಲು ಕ್ರೀಡೆ ಸಹಕಾರಿ ಎಂಬುದು ನಮಗೆಲ್ಲರಿಗೂ ತಿಳಿದಿದೆ.

ಆಟಗಳು ಮತ್ತು ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ, ಅದಕ್ಕಾಗಿಯೇ ದೈಹಿಕ ತರಬೇತಿ, ವ್ಯಾಯಾಮ ಮತ್ತು ಆಟಗಳಿಲ್ಲದೆ – ಶಿಕ್ಷಣವು ಅಪೂರ್ಣವಾಗಿರುತ್ತದೆ. ಅಲ್ಲದೆ, ಶಿಕ್ಷಣದ ಜೊತೆಗೆ, ಆಟಗಳು ಸಹ ನಮ್ಮೆಲ್ಲರನ್ನೂ ಎದ್ದು ನಿಲ್ಲಲು ಮತ್ತು ಜೀವನದ ಎಲ್ಲಾ ಕಠಿಣ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುತ್ತವೆ. ಆಟಗಳನ್ನು ಆಡುವಾಗ, ವಿದ್ಯಾರ್ಥಿಗಳು ಆಮ್ಲಜನಕದ ಉತ್ತಮ ಸೇವನೆಯನ್ನು ತೆಗೆದುಕೊಳ್ಳುತ್ತಾರೆ, ಅವರ ರಕ್ತ ಪರಿಚಲನೆ ಹೆಚ್ಚಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ. ಹ.ತಿಮ್ಮೇನಹಳ್ಳಿ ಮಾತನಾಡಿ,ಕ್ರೀಡಾಪಟುಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸಂಕಲ್ಪ ಇರಬೇಕು. ಸತತ ಪ್ರಯತ್ನದಿಂದ ಜೀವನವನ್ನು ಹಾಗೂ ಕ್ರೀಡೆಗಳಲ್ಲಿ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂದರು.

Department of School Education, ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯಾದ ಸಿಸ್ಟರ್ ಫಿಲೋಮಿನಾ, ಜಿಲ್ಲಾ ಸಂಘದ ಕಾರ್ಯದರ್ಶಿ ಕೆ.ಜಿ.ಮಠಪತಿ, ತಾಲೂಕು ಸಂಘದ ಕಾರ್ಯದರ್ಶಿ, ತೇಜಸ್ ಕುಮಾರ್,ಕ್ರೀಡಾ ಕಾರ್ಯದರ್ಶಿ ಸುರೇಸ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...