Thursday, February 5, 2026
Thursday, February 5, 2026

JCI Institute ಅತಿಮುಖ್ಯ ಕೌಶಲಗಳನ್ನ ಜೆಸಿ ಸ್ಯಾಟ್ ವಿದ್ಯಾರ್ಥಗಳಿಗೆ ಕಲಿಸುತ್ತದೆ- ಜಿ.ವಿ.ಗಣೇಶ್

Date:

JCI Institute ವಿದ್ಯಾಭ್ಯಾಸದ ಜೊತೆಗೆ ಮಕ್ಕಳಲ್ಲಿ ಕೌಶಲ್ಯ ವೃದ್ಧಿಸುವ ಪರೀಕ್ಷೆಗಳು ಅತ್ಯಂತ ಅವಶ್ಯಕ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.
ನಗರದ ರೋಟರಿ ಶಾಲೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಹೊಸ ಹೊಸ ಪರೀಕ್ಷೆಗಳನ್ನು ಎದುರಿಸುವುದು ಹಾಗೂ ಹೊಸ ಫಾರಂಗಳನ್ನು, ಅಪ್ಲಿಕೇಶನ್‌ಗಳನ್ನು ಯಾವ ರೀತಿ ತುಂಬಬೇಕು. ಪರೀಕ್ಷೆಗಳನ್ನ ಹೇಗೆ ಎದುರಿಸಬೇಕು ಎಂಬ ಹಲವಾರು ಅತಿ ಮುಖ್ಯ ಕೌಶಲ್ಯಗಳನ್ನು ಜೆಸಿಐನ ಜೆಸಿ ಸ್ಯಾಟ್ ಕಲಿಸುತ್ತದೆ ಎಂದು ತಿಳಿಸಿದರು.
ಇದು ರಾಷ್ಟ್ರಮಟ್ಟದ ಪರೀಕ್ಷೆ ಆಗಿದ್ದು, ಇದರಲ್ಲಿ ವಿಜೇತರಿಗೆ ಒಂದು ಲಕ್ಷ ರೂ. ಹಾಗೂ 50,000 ರೂ. ಮತ್ತು 25000 ರೂ ನಗದು ಬಹುಮಾನ ಇರುತ್ತದೆ ಎಂದು ಮಾಹಿತಿ ತಿಳಿಸಿದರು.
JCI Institute ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯಕುಮಾರ್ ಮಾತನಾಡಿ, ಜೆಸಿಐ ಸಂಸ್ಥೆ ಮನುಕುಲದ ಸೇವೆಯ ಜೊತೆಗೆ ಮಕ್ಕಳಲ್ಲಿ ಆತ್ಮ ವಿಶ್ವಾಸ, ಕೌಶಲ್ಯವನ್ನು ತುಂಬುವ ಜೊತೆಗೆ ಇಂತಹ ಪರಿಣಾಮಕಾರಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದೆ. ಇಂತಹ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸೂರ್ಯನಾರಾಯಣ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ನೆಪ್ಟ್ಯೂನ್ ಕಿಶೋರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಪ್ರಮುಖರಾದ ಶೇಷಗಿರಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...