Department of Empowerment of the Disabled and Senior Citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅ. 1 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ. 15 ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಈ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾರ್ಥಿಗಳು 60 ವರ್ಷ ಮೇಲ್ಪಟ್ಟವರಾಗಿದ್ದು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರೀಕರ ಗುರುತಿನ ಚೀಟಿಯೊಂದಿಗೆ ಸೆ.12 ರೊಳಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಡಿ.ವೈ.ಎಸ್.ಪಿ. ಕಚೇರಿ ಆವರಣ, ಶಿವಮೊಗ್ಗ ಇಲ್ಲಿ ನೋಂದಣಿ ಮಾಡಿಸಿಕೊಳ್ಳುವುದು. ನೊಂದಣಿಗಾಗಿ ರವೀಂದ್ರ-9164444370, ಕಚೇರಿ ದೂ.ಸಂ.: 08182-221188/280424 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
Department of Empowerment of the Disabled and Senior Citizens ಅಕ್ಟೋಬರ್ 1 ರ ವಿಶ್ವಹಿರಿಯ ನಾಗರಿಕರ ದಿನಾಚರಣೆ ವಿಶೇಷ ಸ್ಪರ್ಧೆಗಳ ಮಾಹಿತಿ
Date:
