Backward Classes Welfare Department – Army-training ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಕಲಬುರಗಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ ತರಬೇತಿ ಶಾಲೆಗೆ https://dk.nic.in ಹಾಗೂ ಉಡುಪಿ ಜಿಲ್ಲೆಯ ತರಬೇತಿ ಶಾಲೆಗೆ https://udupi.nic.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಲಬುರಗಿ ಜಿಲ್ಲೆಯ ಆಯಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಖುದ್ದಾಗಿ ಕಲ್ಯಾಣಾಧಿಕಾರಿಗೆ ಅಥವಾ ನೊಂದಾಯಿತ ಅಂಚೆಯ ಮೂಲಕ ಸಲ್ಲಿಸಬಹುದು. ಕಲಬುರಗಿ ಜಿಲ್ಲೆಗೆ ಸೆ.10, ಉಡುಪಿ ಜಿಲ್ಲೆಗೆ ಸೆ.26 ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಅ.3 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
Backward Classes Welfare Department – Army-training ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡAತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 3/10/2025ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು 3/9/2005 ರಿಂದ 3/10/2008 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಭ್ಯರ್ಥಿಗಳು ಯಾವ ಜಿಲ್ಲೆಯಲ್ಲಿ ತರಬೇತಿಯನ್ನು ಆಯ್ಕೆ ಮಾಡಿಕೊಂಡಿರುತ್ತಾರೋ ಆ ಜಿಲ್ಲೆಯ ತರಬೇತಿ ಶಾಲೆಗೆ ಮಾತ್ರ ಅವಕಾಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ ದಕ್ಷಿಣ ಕನ್ನಡ ಜಿಲ್ಲೆ-0824- 2225078, ಕಲಬುರಗಿ ಜಿಲ್ಲೆ-8105085410/ 9148489157, ಉಡುಪಿ ಜಿಲ್ಲೆ-0820- 2574881 ಗೆ ಸಂಪಕಿರ್ಸಬಹುದೆAದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
Backward Classes Welfare Department – Army-training ಭಾರತೀಯ ಸೇನೆ ಸೇವಾ ಉಚಿತವೃತ್ತಿ ಮಾರ್ಗದರ್ಶನ & ತರಬೇತಿಗೆ ಅರ್ಜಿ ಆಹ್ವಾನ
Date:
