Thursday, March 19, 2026
Thursday, March 19, 2026

Department of School Education ಓದಿನ ಜೊತೆ ಕ್ರೀಡೆಯಲ್ಲಿ ಭಾಗವಹಿಸಿ, ದೈಹಿಕ, ಮಾನಸಿಕ ಸಾಮರ್ಥ್ಯ ಪರೀಕ್ಷಿಸಿಕೊಳ್ಳಬಹುದು- ಗಿರೀಶ್

Date:

Department of School Education ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ಆಗಿದ್ದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಅನುದಾನ ರಹಿತ ಖಾಸಗಿ ವಿದ್ಯಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಗಿರೀಶ್ ಅಭಿಪ್ರಾಯಪಟ್ಟರು.
ಅವರು ನೆಹರೂ ಕ್ರೀಡಾಂಗಣದಲ್ಲಿ ನಾಲ್ಕು ದಿನ ನಡೆಯಲಿರುವ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಹಾಗೂ ಶ್ರೀ ರಾಜರಾಜೇಶ್ವರಿ ಪ್ರೌಢಶಾಲೆ, ಗೋಪಾಳ,ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅನುದಾನ ರಹಿತ ಪ್ರೌಢ ಶಾಲೆಗಳ ‘ಎ’ ಮತ್ತು ‘ಬಿ’ವಲಯಗಳ ವಲಯ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಶಿವಮೊಗ್ಗ ತಾಲ್ಲೂಕಿನ ವಲಯ ಮಟ್ಟದ ಕ್ರೀಡಾ ಕೂಟದ ಧ್ವಜಾರೋಣ ನೆರವೇರಿಸಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ,ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದರು.
ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ. ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸತತವಾಗಿ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ವಾಗುತ್ತದೆ ಎಂದರು.
Department of School Education ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ ರಾಜೇಶ್ವರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಧನಂಜಯ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ,ಆಟದಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ ಎಂದ ಅವರು, ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ನಿವೃತ್ತ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಿ. ಹೆಚ್.ನಿರಂಜನ್ ಮೂರ್ತಿ ಮಾತನಾಡುತ್ತಾ, ಪ್ರಪಂಚದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ, ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವುದು ವಿಷಾದನೀಯ ಎಂದರು. ಮಕ್ಕಳೇ ಈ ದೇಶದ ಭವಿಷ್ಯದ ಪ್ರಜೆಗಳು, ಈಗಿನಿಂದಲೇ ಸತತ ಅಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದರು. ಕಾರ್ಯ ಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಚಂದ್ರಕಾಂತ್, ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ರಾ. ಹ. ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ.ಜಿ.ಮಠಪತಿ, ಸೋಮಶೇಖರ್ ಎಸ್. ಆರ್. ಕಾರ್ಯಕ್ರಮ ನಿರುಪಿಸಿದರೆ, ರಘು ಎಲ್.ಎಸ್. ವಂದಿಸಿದರು.ಕಾರ್ಯಕ್ರಮ ದಲ್ಲಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...