Karnataka Olympic Association ಕರ್ನಾಟಕ ರಾಜ್ಯದ ಯುವ ಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025) ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಕೈಗೊಳ್ಳಲು ಆಯೋಜಿಸಲಾಗಿದ್ದು, ಆಸಕ್ತರಿಂದ ನೋಂದಣಿ ಮಾಡಿಕೊಳ್ಳಲು ಆಹ್ವಾನಿಸಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎರಡು ವರ್ಷಗಳಿಗೊಮ್ಮೆ ನಡೆಯುವ ಇಂಡಿಯಾ ಸ್ಕಿಲ್ಸ್-2025 ಸ್ಪರ್ಧೆಯಲ್ಲಿ 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಕಾರ್ಯಕ್ರಮವಾಗಿದ್ದು, 2026 ನೇ ಸಾಲಿಗೆ ವಿಶ್ವ ಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವವರು https://www.skillindiadigital.gov.in/home ಲಿಂಕ್ ಬಳಸುವ ಮೂಲಕ ಸೆ, 30 ರೊಳಗೆ ಸ್ಪರ್ಧೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಹೆಚ್ಚಿನ ಮಾಹಿತಿಗೆ +919606492216 ನ್ನು ಸಂಪರ್ಕಿಸುವುದು.
Karnataka Olympic Association ಕರ್ನಾಟಕ ಕೌಶಲ್ಯ ಒಲಂಪಿಕ್ಸ್ 2025-26 ಸ್ಪರ್ಧೆಗೆ ಅರ್ಜಿ ಆಹ್ವಾನ
Date:
