Rotary Club Shimoga ಸಮಾಜದ ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಬೇಕು. ಸುರಕ್ಷಿತ ವಾಹನ ಚಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಎಚ್.ಎಲ್.ರವಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಏರ್ಪಡಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಮಾತನಾಡಿ, ರಸ್ತೆ ಸಂಚಾರ ನಿಯಮಗಳ ಪಾಲನೆ ಮಾಡದೆ ಇರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸಿ ಜೀವಹಾನಿಯಾಗುತ್ತಿವೆ. ಎಲ್ಲರೂ ಸಂಚಾರ ನಿಯಮಗಳ ಪಾಲಿಸಿದರೆ ಅಪಘಾತಗಳ ಪ್ರಮಾಣ ಕಡಿಮೆ ಆಗುತ್ತದೆ. ರೋಟರಿ ಸಂಸ್ಥೆಯು ರಸ್ತೆ ಸುರಕ್ಷತೆ ಜಾಗೃತಿಗೆ ವಿಶೇಷ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶಮೂರ್ತಿ ಮಾತನಾಡಿ, ರೋಟರಿ ಸಂಸ್ಥೆಯಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಸಂಚಾರಿ ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ಮಾತನಾಡಿ, ಯುವಜನರು ಬೈಕ್ ಚಾಲನೆ ಮಾಡುವಾಗ ಹೆಲ್ಮೇಟ್ ಹಾಗೂ ಕಾರು ಚಾಲನೆ ಮಾಡುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಜವಾಬ್ದಾರಿಯುತರಾಗಿ ವಾಹನಗಳನ್ನು ಚಲಾಯಿಸಬೇಕು ಎಂದರು.
Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಗೋಪಾಳ ಲಾಸ್ಟ್ ಬಸ್ ನಿಲ್ದಾಣ, ಸಿಟಿ ಬಸ್, ಸ್ಕೂಲ್ ಬಸ್, ಆಟೋ ರಿಕ್ಷಾ, ಕಾರ್ ಮತ್ತು ಲಾರಿ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ನಿಕಟಪೂರ್ವ ಅಧ್ಯಕ್ಷ ಮುಸ್ತಾಕ್ ಆಲಿ ಷಾ, ಕ್ಲಬ್ ಸರ್ವೀಸ್ ಡೈರೆಕ್ಟರ್ ಸಿ.ರಾಜು, ಸ್ವಪ್ನಾ ಮತ್ತಿತರರು ಇದ್ದರು.
