Saturday, December 6, 2025
Saturday, December 6, 2025

Shivamogga Police ಈ ಚಲನ್ ಸಂಚಾರಿ ಪ್ರಕರಣಗಳಲ್ಲಿ ಶೇ 50 ದಂಡ ರಿಯಾಯ್ತಿ ಪಡೆಯಲು ಸೆ.12 ಕೊನೇ ದಿನ

Date:

Shivamogga Police ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿರುವ ಶ್ರೀ ಸಂತೋಷ್ ಎಂ ಎಸ್ ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚಲನ್ ಮೂಲಕ ವಿಧಿಸಲಾದ ದಂಡದ ಪಾವತಿಯಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು. ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ದಿನಾಂಕ 23.08.2025 ರಿಂದ ದಿನಾಂಕ 12.09.2025 ರವರೆಗೆ ಈ ಚಲನ್ ಮೂಲಕ ಪಾವತಿಗಾಗಿ ಬಾಕಿ ಇರುವ ದಂಡದ ಮೊತ್ತದಲ್ಲಿ 50% ಕಡಿತಗೊಳಿಸಿ ಕಡಿಮೆ ಮೊತ್ತದ ದಂಡ ಪಾವತಿ ಮಾಡಿದಲ್ಲಿ ಅಂತಹ ಪ್ರಕರಣವನ್ನು ವಿಲೇ ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಈ ಸವಲತ್ತನ್ನು ಯಾವ ರೀತಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಬಗ್ಗೆ ಪರಿಶೀಲಿಸಲಾಯಿತು.

ಭೇಟಿ ಸಮಯದಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಠಾಣೆಯ ನಿರೀಕ್ಷಕರು ಹಾಗೂ ಉಪನಿರೀಕ್ಷಕರು ನೀಡಿದ ವಿವರದಂತೆ ದಿನಾಂಕ 28.08.2023 ರಿಂದ ದಿನಾಂಕ 30.08.2025 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,94,181 ಪ್ರಕರಣಗಳು ದಾಖಲಾಗಿದ್ದು ಅದರ ದಂಡದ ಒಟ್ಟು ಮೊತ್ತ ರೂ. 23,37,67,500 ಆಗಿದ್ದು ಅವುಗಳ ಪೈಕಿ ಒಟ್ಟು 56,199 ಈ ಚಲನ್ ಪ್ರಕರಣಗಳು ಮುಕ್ತಾಯಗೊಂಡಿದ್ದು ಒಟ್ಟು ರೂ. 4,09,02,500 ರಷ್ಟು ಹಣ ಪಾವತಿ ಮಾಡಲಾಗಿದೆ. ದಾಖಲಾದ ಪ್ರಕರಣಗಳ ಪೈಕಿ 2,37,982 ಈ ಚಲನ್ ಪ್ರಕರಣಗಳು ವಿಲೇವಾರಿಗೆ ಬಾಕಿ ಇದ್ದು ಅವುಗಳಿಂದ ಒಟ್ಟು ರೂ. 19,28,65,000 ರಷ್ಟು ಹಣ ದಂಡದ ಮೂಲಕ ಪಾವತಿಯಾಗಲು ಬಾಕಿ ಇದೆ ಎಂದು ಅಂಕಿ ಅಂಶದ ಮೂಲಕ ನಿರೀಕ್ಷಕರು ತಿಳಿಸಿರುತ್ತಾರೆ.

ದಿನಾಂಕ 13.09.2025 ರಂದು ಅಂದರೆ ಇದೇ ಶನಿವಾರದಂದು ರಾಷ್ಟ್ರೀಯ ಲೋಕ ಅದಾಲತ್ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು ಅದರ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಈ ಚಲನ್ ಮೂಲಕ ವಿಧಿಸಲಾದ ದಂಡದ ಮೊತ್ತದಲ್ಲಿ 50% ಕಡಿಮೆ ಮಾಡಿ ದಂಡದ ಮೊತ್ತವನ್ನು ಪಾವತಿ ಮಾಡುವಂತೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿರುವ ಯೋಜನೆಯು ಇನ್ನು ಕೇವಲ ಒಂದೇ ದಿನ ಜಾರಿಯಲ್ಲಿ ಇರುವ ಕಾರಣ ಅತಿ ಹೆಚ್ಚು ಪ್ರಕರಣಗಳಲ್ಲಿ ಕಡಿಮೆ ಮೊತ್ತದ ದಂಡ ಪಾವತಿ ಮಾಡಿ ಸಾರ್ವಜನಿಕರು ಅವಕಾಶದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗದಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ ಸದಸ್ಯ ಕಾರ್ಯದರ್ಶಿಗಳು ಕೋರಿಕೊಂಡಿದ್ದಾರೆ.

Shivamogga Police ಸಾರ್ವಜನಿಕರು ತಮ್ಮ ವಾಹನ ಸಂಖ್ಯೆಯನ್ನು ನಮೂದಿಸುವ ಮೂಲಕ ಸಂಚಾರಿ ಪೊಲೀಸ್ ಠಾಣೆ ಅವರು ಬಿಡುಗಡೆಗೊಳಿಸಿರುವ ಕ್ಯೂಆರ್ ಕೋಡ್ ಮೂಲಕ ಈ ಚಲನ್ ಪ್ರಕರಣಗಳ ವಿವರವನ್ನು ತಿಳಿದುಕೊಳ್ಳಬಹುದು. ತಮ್ಮ ವಾಹನದ ಮೇಲೆ ಪ್ರಕರಣಗಳು ದಾಖಲಾಗಿದ್ದರೆ ಅವುಗಳಿಗೆ ಸಂಬಂಧಿಸಿದ ದಂಡದ ಮೊತ್ತದಲ್ಲಿ 50% ಕಡಿಮೆ ಮೊತ್ತದ ಹಣವನ್ನು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಹಾಗೂ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಭದ್ರಾವತಿ ನಗರದ ಸಂಚಾರಿ ಪೊಲೀಸ್ ಠಾಣೆ ಅಲ್ಲದೆ ರಸ್ತೆಯ ವೃತ್ತದಲ್ಲಿ ಇರುವಂತಹ ಸಂಚಾರಿ ಪೊಲೀಸ್ ಅಧಿಕಾರಿ ಆಗಿರುವಂತಹ ಸಹಾಯಕ ಪೊಲೀಸ್ ನಿರೀಕ್ಷಕರ ಬಳಿ ಇರುವ ಈ ವಿ ಎಂ ಯಂತ್ರಗಳ ಮೂಲಕ ಸಾರ್ವಜನಿಕರು ದಂಡದ ಮೊತ್ತವನ್ನು ಪಾವತಿ ಮಾಡಲು ಅನುಕೂಲ ಮಾಡಲಾಗಿದ್ದು ಈ ಅವಕಾಶದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...