Department of Social Welfare ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನನ್ನ ಮತ ನನ್ನ ಹಕ್ಕು’ ಎಂಬ ಘೋಷವಾಖ್ಯದಡಿ ಸೆ.15 ರಂದು ಬೆಳಗ್ಗೆ 07-30 ಗಂಟೆಗೆ ಶಿವಮೊಗ್ಗ ನಗರದ ಅಲ್ಲಮ ಪ್ರಭು ಉದ್ಯಾನ (ಫ್ರೀಡಂ ಪಾರ್ಕ್) ದಿಂದ ಪ್ರಾರಂಭಿಸಿ ಡಾ. ಬಿ.ಆರ್. ಅಂಬೇಡ್ಕರ್ ಭವನದವರೆಗೆ ಸೈಕಲ್ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
Department of Social Welfare ದಿನಾಚರಣೆಯ ವೇದಿಕೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳುಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
