Chamber Of Commerce Shivamogga ರಸಪ್ರಶ್ನೆ ಮತ್ತು ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಮತ್ತು ಇಂಜಿನಿಯರ್ಸ್ ಡೇ ಪ್ರಯುಕ್ತ ಏರ್ಪಡಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಸಪ್ರಶ್ನೆ ಮತ್ತು ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅರಿವಿನ ಕೌಶಲ್ಯಗಳನ್ನು ಹೆಚ್ಚಿಸುವುದು, ಜ್ಞಾನ ವೃದ್ಧಿಸುವುದು, ವಿಮರ್ಶಾತ್ಮಕ ಚಿಂತನೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವುದು ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚಿಸುವುದಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳನ್ನು ಅಧ್ಯಯನ ಮಾಡಲು ಮತ್ತು ಭಾಗವಹಿಸಲು ಪ್ರೇರೇಪಿಸುವ ಸಕಾರಾತ್ಮಕ ಕಲಿಕಾ ಶೈಲಿಯನ್ನು ಒದಗಿಸುತ್ತವೆ.
ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳು ತಮ್ಮ ಸಾರ್ವಜನಿಕ ಭಾಷಣ ಮತ್ತು ಸಂವಹನ ಸಾಮರ್ಥ್ಯಗಳನ್ನು ಅಭ್ಯಾಸ ಮಾಡಲು ಮತ್ತು ಪರಿಷ್ಕರಿಸಲು ರಚನಾತ್ಮಕ ವೇದಿಕೆಗಳನ್ನು ನೀಡುತ್ತವೆ. ಇದು ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯ ಬೆಳೆಸುತ್ತದೆ ಎಂದರು.
ಡಿವಿಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ಭಾಸ್ಕರ್, ಉಪನ್ಯಾಸಕರಾದ ಸಿ.ಎಸ್ ರಾಜೇಶ್, ಶ್ರೀಧರ್ ಅವರು ರಸಪ್ರಶ್ನೆ ಮತ್ತು ಭಾಷಣ ಸ್ಪರ್ಧೆ ನಡೆಸಿಕೊಟ್ಟರು.
ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್ ಸಿ ಉಮೇಶ್ ಅವರು ರಸಪ್ರಶ್ನೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಮೂರು ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಚೆತುಸ್ಕಿ ಆತ್ರೇಯ ಪ್ರಥಮ ಸ್ಥಾನ ಅಂಶುಮಂತ್ ಮಂಜು ಪಾಟೀಲ್ ದ್ವಿತೀಯ ಸ್ಥಾನ, ದೀಕ್ಷಿತ್ ಕಾರ್ತಿಕ್ ತೃತೀಯ ಸ್ಥಾನ ವಿಜೇತರಾದರು.
Chamber Of Commerce Shivamogga ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರ ಬಗ್ಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಶ್ರದ್ದಾ ಪ್ರಥಮ ಸ್ಥಾನ, ಶಾರ್ವರಿ ದ್ವಿತೀಯ ಸ್ಥಾನ, ಪ್ರಜ್ವಲ್ ಡಿ ತೃತೀಯ ಸ್ಥಾನ ಪಡೆದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ ಎಂ ಸುರೇಶ್, ಖಜಾಂಚಿ ಆರ್ ಮನೋಹರ, ನಿರ್ದೇಶಕರಾದ ಎಸ್. ಎಸ್.ಉದಯ ಕುಮಾರ್, ಗಣೇಶ್ ಎಂ ಅಂಗಡಿ, ಬಿ.ಸುರೇಶ್ ಕುಮಾರ್, ವಿದ್ಯಾರ್ಥಿಗಳು, ಪೋಷಕರು ಶಿಕ್ಷಕರು ಭಾಗವಹಿಸಿದ್ದರು.
