Karnataka Ratna ರಾಜ್ಯ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಇದೀಗ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಿಗೆ ಒಲಿದು ಬಂದಿದೆ.
‘ಸಾಹಸಸಿಂಹ’ ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಬಿ. ಸರೋಜಾದೇವಿಯವರು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಈ ವಿಷಯವನ್ನು ಮಾಧ್ಯಮಗಳೆದುರು ಪ್ರಸ್ತಾಪಿಸಿದರು.
Karnataka Ratna 220ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ, ಇಡೀ ರಾಜ್ಯದ ಮನೆ ಮನ ತಲುಪಿರುವಂತಹ ದಿಗ್ಗಜ ನಟ ವಿಷ್ಣುವರ್ಧನ್‌ಗೆ, ಕರ್ನಾಟಕದ ಶ್ರೇಷ್ಠ ಪುರಸ್ಕಾರ ನೀಡಬೇಕು ಎನ್ನುವುದು ಅವರ ಕುಟುಂಬ ವರ್ಗ ಸೇರಿದಂತೆ ಚಿತ್ರರಂಗದ ಅನೇಕ ಕಲಾವಿದರು, ಅಭಿಮಾನಿಗಳ ಬಯಕೆಯಾಗಿತ್ತು.
ಅದರಂತೆಯೇ ರಾಜ್ಯ ಸರ್ಕಾರ ಎಲ್ಲರ ಮನವಿಗೆ ಸ್ಪಂದಿಸಿ ಪ್ರಶಸ್ತಿ ಘೋಷಿಸಿದೆ ಎಂದರು.
