DK Shivakumar ತುಂಬಿದ ಭದ್ರಾ ಜಲಾಯಶ ರೈತರ ಜೀವನಕ್ಕೆ ಸುಭದ್ರತೆ ನೀಡಿದ್ದು, 5 ಜಿಲ್ಲೆಗಳ ರೈತರಿಗೆ ಇದು ಜೀವನಾಡಿ ಆಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೃಹತ್ ಮತ್ತು ಮಧ್ಯಮ ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಡಿ.ಕೆ.ಶಿವಕುಮಾರ್ ಹೇಳಿದರು.
ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಬಿ.ಆರ್.ಪ್ರಾಜೆಕ್ಟ್ನಲ್ಲಿ ಭದ್ರಾ ಜಲಾಶಯ ಬಾಗಿನ ಸಮರ್ಪಣೆ ಹಾಗೂ ನೂತನ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭದ್ರಾ ಜಲಾಶಯ ತುಂಬಿರುವುದರಿAದ ಬಯಲು ಸೀಮೆಯ ರೈತರಿಗೆ ಅನುಕೂಲವಾಗಿದೆ. 60 ವರ್ಷಗಳ ಹಿಂದೆ ರೈತರ ಹಿತದೃಷ್ಟಿಯಿಂದ ಸರ್ ಎಂ. ವಿಶ್ವೇಶ್ವರಯ್ಯವರು ಈ ಜಲಾಶಯವನ್ನು ಸ್ಥಾಪನೆ ಮಾಡಿದ್ದು, 1945 ಜಲಾಶಯ ನಿರ್ಮಾಣ ಮಾಡವ ಬಗ್ಗೆ ಸಮೀಕ್ಷೆಯ ನಡೆಸಿ, 1965 ರಲ್ಲಿ ಅದನ್ನು ಕಾರ್ಯ ರೂಪಕ್ಕೆ ತಂದರು ಎಂದು ಹೇಳಿದರು.
ರೈತನಿಗೆ ಸರ್ಕಾರಿ ನೌಕರರಂತೆ ಸಂಬಳ, ಪಿಂಚಣಿ, ನಿವೃತ್ತಿ ಯಾವುದು ಇಲ್ಲ. ಇಂತಹ ರೈತರನ್ನು ಬದುಕಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ಈಗಾಗಲೇ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಕೋರಿಕೆಯಂತೆ ನಾಲೆಗಳನ್ನು ಅಭಿವೃದ್ದಿ ಪಡಿಸಲು 100 ಕೋಟಿ ಅನುದಾನ ಈಗಾಗಲೇ ನೀಡಲಾಗಿದ್ದು, ಈ ಮೂಲಕ ರಾಜ್ಯದ ಎಲ್ಲಾ ಶಾಸಕರು ಜನರ ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಅವಕಾಶ ಸಿಕ್ಕಾಗ ಪುಣ್ಯ ಕೆಲಸ ಮಾಬೇಕಾಗುತ್ತದೆ. ಅದರಂತೆ ಈಗಾಗಲೇ ನಮ್ಮ ಸರ್ಕಾರದ ನೀರಾವರಿ ಯೋಜನೆಗೆ 11 ಸಾವಿರ ಕೋಟಿ ಖರ್ಚು ಮಾಡಿದ್ದು, ಚನ್ನಗಿರಿ ವ್ಯಾಪ್ತಿಯ ನೀರಾವರಿಗೆ 362 ಕೋಟಿ ಕೊಟ್ಟಿದ್ದೇವೆ. ಹಾಗೂ ಸರ್ವರಿಗೂ ಸಮಪಾಲು-ಸಮಬಾಳು ಆಶಯದಂತೆ ರಾಜ್ಯ ಜನರ ಏಳಿಗಾಗಿ ಸರ್ಕಾರದಿಂದ 5 ಗ್ಯಾರಂಟಿ ಯೋಜನೆಯನ್ನು ಕೂಡ ಜಾರಿ ಮಾಡಿದ್ದೇವೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5500 ಕೋಟಿ ಕೊಡುವುದಾಗಿ ಹೇಳಿದ್ರು. ಇದೀಗ ರಾಜ್ಯ ಸರ್ಕಾರ 10,000 ಕೋಟಿ ಖರ್ಚು ಮಾಡಿದೆ. ಆಲಮಟ್ಟಿ ಜಲಾಶಯ 524 ಅಡಿಗೆ ಏರಿಸಲು ಗೆಜೆಟ್ ನೋಟಿಫಿಕೇಶನ್ ಆಗಿಬೇಕಿದೆ. ಆದರೆ ಅದರಲ್ಲೂ ರಾಜಕೀಯ ಮಾಡಲಾಗುತ್ತಿದೆ ಎಂದರು.
DK Shivakumar ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ ಮಾತನಾಡಿ, ಭದ್ರಾ ಜಲಾಶಯದಿಂದ ಮೂರು ಜಿಲ್ಲೆಗೆ ನೀರನ್ನು ಒದಗಿಸುವ ಕೆಲಸ ಮಾಡಿಲಾಗಿದ್ದು, ಆ ಭಾಗದ ಜನರಿಗೆ. ಭದ್ರಾ ಜಲಾಶಯ ಜೀವನಾಡಿ ಆಗಿದೆ. ಎಸ್. ಎಂ. ಕೃಷ್ಣ ಅವರು ಮುಖ್ಯ ಮಂತ್ರಿಯಾಗಿದ್ದಾಗ ಈ ಯೋಜನೆಗಾಗಿ 300 ಕೋಟಿ ಬಿಡುಗಡೆ ಮಾಡಲಾಗಿತ್ತು. ಇದರಿಂದ ಹೊಸಪೇಟೆಯ ಒಂದು ತಾಲ್ಲೂಕು, ದಾವಣಗೆರೆಯ 3 ತಾಲ್ಲೂಕಿಗೆ ಅನುಕೂಲವಾಯಿತು ಹಾಗೂ ಭದ್ರ ಬಲದಂಡೆಯಿAದ ಭದ್ರಾವತಿ, ಮಾಯಕೊಂಡ, ಹರಪ್ಪನಹಳ್ಳಿ, ದಾವಣಗೆರೆ ತಾಲೂಕುಗಳಿಗೆ 1.46 ಲಕ್ಷ ಕ್ಯೂಸೆಕ್ಸ್ ನೀರು ಹರಿಯುತ್ತಿದೆ ಎಂದರು.
ಎಲ್ಲರಿಗೂ ಕುಡಿಯುವ ನೀರನ್ನು ಕೊಡಬೇಕು. ಇದರ ಬಗ್ಗೆ ಒಂದು ಸೂಕ್ತವಾದ ನಿರ್ಧಾರವನ್ನು ಕೂಡ ಮಾಡಲಾಗಿದೆ. ಆ ನಿಟ್ಟಿನಲ್ಲಿ ಭದ್ರಾ ಜಲಾಶಯದ ನೀರಾವರಿ ಯೋಜನೆಗೆ ಹೆಚ್ಚು ಅನುದಾನ ಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಶಾಸಕರೆಲ್ಲರೂ ಸೇರಿ ಒಗ್ಗಟ್ಟಿನಿಂದ ರೈತರಿಗೆ ನೀರನ್ನು ತಲುಪಿಸುವ ಕೆಲಸ ಮಾಡಲಾಗಿದೆ. ಇದಕ್ಕೆ ಸಂಬAಧಿಸಿದAತೆ ಇನ್ನಷ್ಟು ನೀರಾವರಿ ಅಭಿವೃದ್ಧಿಗಾಗಿ ಅನುದಾನವನ್ನು ಸರ್ಕಾರ ಬಳಿ ಕೇಳಿದ್ದೇವೆ ಅದನ್ನು ಪೂರೈಸುವ ಭರವಸೆಯಿದೆ ಎಂದು ಎಸ್. ಎಸ್. ಮಲ್ಲಿಕಾರ್ಜುನ ತಿಳಿಸಿದರು.
ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ದಾವಣಗೆರೆ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್, ತರಿಕೇರೆ ಶಾಸಕ ಬಿ.ಹೆಚ್.ಶ್ರೀನಿವಾಸ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಹರಪ್ಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊನ್ನಳ್ಳಿ ಶಾಸಕ ಶಾಂತನಗೌಡ ಡಿ.ಜಿ, ಗುಬ್ಬಿ ಶಾಸಕ ಶ್ರೀನಿವಾಸ, ವಿಧಾನ ಪರಿಷತ್ ಶಾಸಕರುಗಳಾದ ಬಲ್ಕೀಶ್ ಬಾನು, ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಅಲೆಮಾರಿಗಳ ಅಭಿವೃದ್ದಿ ನಿಗಮ ಅಧ್ಯಕ್ಷೆ ಪಲ್ಲವಿ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರಿದ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿವಿಧ ನಿಗಮ, ಮಂಡಳಿ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು ಪೊಲೀಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
