Department of Health and Family Welfare ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಲಯ ಹನ್ನೊಂದರ ಸಹಾಯಕ ಗವರ್ನರ್ ಲಕ್ಷ್ಮಣಗೌಡ ಎಂ.ಬಿ. ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಅಂಧತ್ವ ಮುಕ್ತ ಶಿವಮೊಗ್ಗ
ಕಾರ್ಯಕ್ರಮದಲ್ಲಿ ಮಾತನಾಡಿ, ನೇತ್ರ ಶಿಬಿರದಿಂದ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡುತ್ತದೆ ಮತ್ತು ನಿಯಮಿತ ತಪಾಸಣೆಯಿಂದ ಕಣ್ಣಿನ ಆರೋಗ್ಯದ ಬಗ್ಗೆ ಅರಿವು ಮೂಡುತ್ತದೆ ಎಂದು ತಿಳಿಸಿದರು.
Department of Health and Family Welfare ರೋಟರಿ ವಲಯ ಹನ್ನೊಂದರ ವಲಯ ಸೇನಾನಿ ಕಿರಣ್ ಕುಮಾರ್ ಜಿ (ಎಸ್ ಬಿ ಎಸ್ ಬೋರ್ವೆಲ್ಸ್ ) ಅವರು ಉಚಿತವಾಗಿ ನೂರು ಕನ್ನಡಕಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ಹುಟ್ಟಿನಿಂದಲೇ ದೃಷ್ಟಿ ಕಳೆದುಕೊಂಡವರು ಪ್ರಪಂಚವನ್ನು ನೋಡುವ ಭಾಗ್ಯದಿಂದ ವಂಚಿತರಾಗಿರುತ್ತಾರೆ. ಆದರೆ ಬಹಳಷ್ಟು ಜನ ತಮ್ಮ ನಿರ್ಲಕ್ಷದಿಂದಲೇ ದೃಷ್ಟಿ ಕಳೆದುಕೊಂಡವರು ಇದ್ದಾರೆ. ದೃಷ್ಟಿ ಇದ್ದವರು ಕಣ್ಣಿಗೆ ರಕ್ಷಣೆಗೆ ಒತ್ತು ಕೊಡುವುದು ಅವಶ್ಯ. ಸರ್ಕಾರದಿಂದ ಪ್ರಾರಂಭಿಸಿರುವ ಯೋಜನೆಯನ್ನು ಹೆಚ್ಚು ಹೆಚ್ಚು ಜನ ಉಪಯೋಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ನಿಯೋಜಕ ಡಾ. ಕಿರಣ್ ಕುಮಾರ್ ಕೆ ಹಾಗೂ ಡಾ. ಗುಡದಪ್ಪ ಕಸುಬಿ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಧನಂಜಯ್, ಮೋಹನ್, ಸಂತೋಷ್ ಬಿಎ, ಅರುಣ್ ದೀಕ್ಷಿತ್, ನಟರಾಜ್, ಗೀತಾ ಜಗದೀಶ್, ರಾಜೇಶ್ವರಿ ಬಸವರಾಜ್, ಜ್ಯೋತಿ ಶ್ರೀ ರಾಮ್, ಈಶ್ವರ್ ಬಿ ವಿ ಹಾಗೂ ಕ್ಲಬ್‌ನ ಎಲ್ಲ ಸದಸ್ಯರು ಭಾಗವಹಿಸಿದ್ದರು.
