Women and Child Welfare Department ಶಿವಮೊಗ್ಗ ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಾಗೂ ಮಾಜಿ ದೇವದಾಸಿಯರ ಸಮೀಕ್ಷೆಯಲ್ಲಿ ಸೇರುವ ಕುರಿತಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಲಿಂಗತ್ವ ಅಲ್ಪ ಸಂಖ್ಯಾತರ ಸಮೀಕ್ಷೆಯು ಪ್ರತಿ ತಾಲ್ಲೂಕಿನ ತಾಲ್ಲೂಕು ಆಸ್ಪತ್ರೆ /ಎ.ಟಿ.ಆರ್. ಸೆಂಟರ್‌ಗಳಲ್ಲಿ ಹಾಗೂ ಮಾಜಿ ದೇವದಾಸಿಯರ ಸಮೀಕ್ಷೆಯನ್ನು ಪ್ರತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಸೆ.15 ರಿಂದ 45 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ರವರೆಗೆ ನಡೆಸಲಾಗುವುದು. ಜಿಲ್ಲೆಯಲ್ಲಿರುವ ಎಲ್ಲಾ ಲಿಂಗತ್ವ ಅಲ್ಪ ಸಂಖ್ಯಾತರು ಹಾಗೂ ಮಾಜಿ ದೇವದಾಸಿಯರು ಸೆ. 30 ರೊಳಗಾಗಿ ಈ ಸಮೀಕ್ಷೆಗೆ ಹಾಜರಾಗಿ ಮಾಹಿತಿಯನ್ನು ಸಮೀಕ್ಷೆಯಲ್ಲಿ ಸೇರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Women and Child Welfare Department ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿವಮೊಗ್ಗ ದೂ.ಸಂ.08182-295514, ಮೊ.ಸಂ.9448681051 ಗೆ ಸಂಪರ್ಕಿಸಬಹುದು.
Women and Child Welfare Department ಲಿಂಗತ್ವ ಅಲ್ಪ ಸಂಖ್ಯಾತರ ಮತ್ತು ಮಾಜಿ ದೇವದಾಸಿಯರಿಂದ ಅರ್ಜಿ ಆಹ್ವಾನ
Date:
