Wednesday, September 16, 2026
Wednesday, September 16, 2026

Adichunchanagiri Branch ಶಿವಮೊಗ್ಗದ ಆದಿಚುಂಚನಗಿರಿ ಶಾಖಾಮಠದಲ್ಲಿ ಶರನ್ನವರಾತ್ರಿ ಉತ್ಸವ

Date:

Adichunchanagiri Branch ಶರಾವತಿ ನಗರದ ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ 22/09/2025 ರಿಂದ 02/10/2025 ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗಳಿಂದ ಪೂಜಾ ಕೈಂಕರ್ಯಗಳು ಜರುಗಲಿವೆ. Adichunchanagiri Branch ಸಂಜೆ ದುರ್ಗಾಹೋಮ ನಡೆಸಲಾಗುವುದು, ಪ್ರತಿದಿನ ಸಂಜೆ 6:15 ರಿಂದ 7:20 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಹಾಗೂ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮಿಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಸೆ, 30/09/2025 ರಂದು ಬೆಳಿಗ್ಗೆ 7 ರಿಂದ ಚಂಡಿಕಾ ಹೋಮ, ಮಹಾಮಂಗಳಾರತಿ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ನಂತರ ಪ್ರಸಾದ ವಿನಿಯೋಗ ವಿರುತ್ತದೆ. ಅ,02/10/2025 ರ ಸಂಜೆ 5 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮವಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ.ಶ್ರೀ ಕಾಳಿಕಾಂಬ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶಿಮೊಗ್ಗ ಶಾಖಾಮಠದ ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...