Saturday, December 6, 2025
Saturday, December 6, 2025

Madhu Bangarappa ದೇವಾಲಯಗಳಲ್ಲಿನ ಗಂಟೆ ಸದ್ದಿಗಿಂತ ಶಾಲೆಗಳಲ್ಲಿನ ಗಂಟೆ ಸದ್ದು ದೇಶ ಕಟ್ಟುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿಸುತ್ತದೆ- ಮಧು ಬಂಗಾರಪ್ಪ

Date:

Madhu Bangarappa ಹಸಿದ ಒಡಲಿಗೆ ಅನ್ನ, ಶ್ರಮಿಕ ಕೈಗಳಿಗೆ ಉದ್ಯೋಗ ದೊರೆತರೆ ಜೀವನ ಸುಗಮವಾಗಲಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿವಮೊಗ್ಗ ಸಮೀಪದ ಆಯನೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಜಾಮಿಯ ಶಾದಿ ಮಹಲ್ ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ದೇವಾಲಯಗಲ್ಲಿನ ಗಂಟೆ ಸದ್ದಿಗಿಂತ ಶಾಲೆಗಳಲ್ಲಿ ಗಂಟೆ ಸದ್ದು ದೇಶವನ್ನು ಕಟ್ಟುವ ಯುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ರೂಪಿಸುತ್ತದೆ. ಸಾಮಾಜಿಕವಾಗಿ ಸ್ಥಾನಮಾನ ಹೊಂದಲು ಶಿಕ್ಷಣ ಅಗತ್ಯವಾಗಿದೆ. ಮುಸ್ಲಿಂ ಸಮುದಾಯದವರು ಸಹ ಇತ್ತೀಚಿನ ದಿನಗಳಲ್ಲಿ ಶಿಕ್ಷಣಕೆಜೆ ಒತ್ತು ನೀಡಿ, ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಲ್ಲಿ ಉತ್ಸುಕರಾಗಿದ್ದಾರೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ಸಂಖ್ಯೆ ಅಂದ್ರೆ ಒಟ್ಟು ಸರ್ಕಾರಿ ನೌಕರರಲ್ಲಿ ಶೇ. 38ರಷ್ಟು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ಫು, ಸುಮಾರು 45000ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದ ಅವರು, ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನಿಗಿಸಲು ಕ್ರಮ ಕೈಗೊಳ್ಳಲಾಗಿದೆ ಅಲ್ಲದೆ ಹಳೆಯ ಕಟ್ಟಡಗಳ ದುರಸ್ತಿ ಮತ್ತು ನೂತನ ಕೊಠಡಿಗಳ ನಿರ್ಮಾಣ ಕ್ಕೆ ಗಮನಹರಿಸಲಾಗುತ್ತಿದೆ ಎಂದರು.

ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರ ವತಿಯಿಂದ 1591ಕೋಟಿ ರು. ಗಳ ಉದಾರ ನೆರವಿನಿಂದ ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಪೌಸ್ತಿಕ ಆಹಾರ ಮೊಟ್ಟೆಯನ್ನು ವಾರದ ಆರು ದಿನಗಳ ಕಾಲ ವಿತರಿಸಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಜೀವನ ಮಟ್ಟದ ಸುಧಾರಿಸಿದೆ. ಈ ಕಾರ್ಯಕ್ರಮ ವನ್ನು ನೆರೆಯ ರಾಜ್ಯಗಳು ಅನುಸರಿಸುತ್ತಿರುವುದು, ಮಧ್ಯವರ್ಥಿಗಳಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿರುವುದು ಅದರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

Madhu Bangarappa ಸುಮಾರು ಎರಡು ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶಾದಿ ಮಹಲ್ ಉತ್ತಮ ವಿನ್ಯಾಸದಲ್ಲಿ ನಿರ್ಮಿಸಲಾಗಿದೆ. ಈ ಕಟ್ಟಡ ಉದ್ದೇಶಿತ ಕೆಲಸ ಕಾರ್ಯಗಳಿಗೆ ಬಳಕೆ ಆಗಬೇಕು. ಮುಂದಿನ ದಿನಗಳಲ್ಲಿ ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ನೆರವನ್ನು ಸರ್ಕಾರದಿಂದ ಒಡಹಿಸಲಾಗುವುದು ಎಂದರು.

ಕಾರ್ಯಕ್ರಮ ದಲ್ಲಿ ಶಾಸಕರಾದ ಶ್ರೀಮತಿ ಶಾರದಾ ಪೂರ್ಯಾನಾಯ್ಕ್, ಶ್ರೀಮತಿ ಬಲ್ಕಿಸ್ ಬಾನು, ಮಂಜುನಾಥ್ ಬಂಡಾರಿ, ಆಯನೂರ್ ಮಂಜುನಾಥ್, ಕಲಗೋದು ರತ್ನಾಕರ್, ರಮೇಶ್, ಶ್ರೀನಿವಾಸ್ ಕರಿಯಣ್ಣ, ಆರ್. ಪ್ರಸನ್ನಕುಮಾರ್, ಅಸಾಯದ್ ಅಬುಬಕರ್, ಜಬಿವುಲ್ಲಾ ರಾಜವಿ ಮತ್ತಿತರರು ಉಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...