S. L. Byrappa ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಸೆ.24ರಂದು ನಿಧನರಾಗಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಬೆಂಗಳೂರಿನ ಮನೆಯಲ್ಲಿ ಬಂದು ವಾಸವಾಗಿದ್ದರು ಎನ್ನಲಾಗಿದೆ.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.
S. L. Byrappa ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.
