Saturday, December 6, 2025
Saturday, December 6, 2025

Chamber of Commerce Shivamogga ಕುಟುಂಬ ಮಿಲನ ಕಾರ್ಯಕ್ರಮಗಳಿಂದ ಪರಸ್ಪರ ಬಾಂಧವ್ಯ ಗಟ್ಟಿ,- ಜಿ.ವಿಜಯ ಕುಮಾರ್

Date:

Chamber of Commerce Shivamogga ಕುಟಂಬ ಮಿಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಖಿನ್ನತೆ ದೂರವಾಗಿಸುತ್ತದೆ. ಪರಸ್ಪರರಲ್ಲಿ ಒಡನಾಟ ಪ್ರೀತಿ ವಿಶ್ವಾಸ ವೃದ್ಧಿಯಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯಕುಮಾರ್ ಹೇಳಿದರು.

ಶಿವಮೊಗ್ಗ ನಗರದ ವಿನಾಯಕ ನಗರ ರೋಟರಿ ಬ್ಲಡ್ ಬ್ಯಾಂಕ್ ಸಭಾಂಗಣದಲ್ಲಿ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ ವತಿಯಿಂದ ದಸರಾ ಹಬ್ಬ ದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆ, ಕ್ರೀಡೆ ಹಾಗೂ ಕುಟುಂಬ ಮಿಲನ. ಪ್ರತಿಭಾ ಪುರಸ್ಕಾರ. ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬರು ತಮ್ಮದೇ ಆದ ವ್ಯವಹಾರದಲ್ಲಿ ತೊಡಗಿರುತ್ತಾರೆ. ಒತ್ತಡದ ಜೀವನಶೈಲಿಯಲ್ಲಿ ಒಂದಿಷ್ಟ ಮನರಂಜನೆ, ಹಾಡು, ಸಾಂಸ್ಕೃತಿಕ ಕಾರ್ಯಕ್ರಮ ಹೊಸ ಚೈತನ್ಯ ನೀಡುತ್ತದೆ. ಪ್ರತಿಭೆ ಅನಾವರಣಗೊಳಿಸಲು ವೇದಿಕೆ ಸಿಗುತ್ತದೆ ಎಂದು ತಿಳಿಸಿದರು.

ಭಾವಸಾರ ಇಂಡಿಯಾ ಪ್ರೇರಣ ಸಂಸ್ಥೆಯ ಸದಸ್ಯರು ಕರೋನಾ. ಹಾಗೂ ಪ್ರವಾಹ ಸಂದರ್ಭದಲ್ಲಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮ ಮಾಡಿರುವುದು ಶ್ಲಾಘನೀಯ. ಹಾಗೂ ರಕ್ತದಾನ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಿರುವುದು. ಮತ್ತು ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ವಿದ್ಯಾಭ್ಯಾಸದ ನೆರವು ನೀಡುತ್ತಿರುವುದು. ಸಂಸ್ಥೆಯ ಗೌರವವನ್ನು ಹೆಚ್ಚಿಸಿದೆ . ಸಂಸ್ಥೆಯಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ನೀಡುವ ಶಕ್ತಿ ದೊರಕಲಿ ಎಂದು ಆಶಿಸಿದರು.

ಅಂತ್ಯಾಕ್ಷರಿ ಸ್ಪರ್ಧೆ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಹಳೇ ಚಿತ್ರಗೀತೆಗಳನ್ನು ಹಾಡಿ ರಂಜಿಸಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಉತ್ತರ್ ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆ ಈಗಾಗಲೇ ಹತ್ತು ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಮಾಡುವ ಜತೆಯಲ್ಲಿ ಸದಸ್ಯರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

Chamber of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯದರ್ಶಿ ಅವಿನಾಶ್ ಮಿರಾಜ್ ಕರ್. .. ಸಂಸ್ಥಾಪಕ ಅಧ್ಯಕ್ಷರಾದ ಎಂ ಎನ್ ವೆಂಕಟೇಶ. ಮಾಜಿ ಅಧ್ಯಕ್ಷರುಗಳಾದ ಉಮಾ ವೆಂಕಟೇಶ್ ವಿನಾಯಕ ಡೊಯೆಜೆ ಸುನಿಲ್ ಬೇಂದ್ರೆ ಹರೀಶ್ ಲಾತೂರ ಹಾಗೂ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...