Rotary Club Shivamogga ಭವ್ಯ ಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅಪಾರ ಎಂದು ಅಂತರಾಷ್ಟ್ರೀಯ ತರಬೇತುದಾರ ವಿಲಿಯಂ ಡಿಸೋಜಾ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ ಸಹಯೋಗದಲ್ಲಿ ಎಟಿಎನ್‌ಸಿಸಿ ಕಾಲೇಜಿನಲ್ಲಿ ಆಯೋಜಿಸಿದ್ದ ವಾಣಿಜ್ಯ ಶಿಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರು ಸಮಯ ಪಾಲನೆ ಮಾಡಬೇಕು. ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶ್ರೇಷ್ಠ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಮಾತನಾಡಿ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಣ ಮತ್ತು ಸಂಸ್ಕಾರ ಅತ್ಯಂತ ಅವಶ್ಯಕ. ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಸಿಗುವಂತಾಗಬೇಕು ಎಂದರು.
ಸಮಾಜಮುಖಿ ಕಾರ್ಯ ಚಟುವಟಿಕೆಗಳ ಜತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಉತ್ತಮ ನಿರ್ಮಾಣ ಮಾಡುವಲ್ಲಿ ರೋಟರಿ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.
ಎಟಿಎನ್‌ಸಿಸಿ ಪ್ರಾಚಾರ್ಯೆ ಮಮತಾ ಮಾತನಾಡಿ, ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡುವ ಮೂಲಕ ಉನ್ನತ ಸಾಧನೆ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮಾತನಾಡಿ, ಮೌಲ್ಯಗಳಿಲ್ಲದ ಜ್ಞಾನವು ಬೇರು ರಹಿತ ಸಸಿಯಂತೆ, ಜ್ಞಾನವಿಲ್ಲದ ಮೌಲ್ಯಗಳು ಶಕ್ತಿಹೀನ. ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಮೌಲ್ಯಯುತ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
Rotary Club Shivamogga ಪ್ರೊ. ಸತ್ಯನಾರಾಯಣ, ರೋಟರಿ ಲರ್ನಿಂಗ್ ಫೆಸಿಲಿಟೇಟರ್ ನಾಗರಾಜು, ರೋಟರಿ ಕಾರ್ಯದರ್ಶಿ ರಶ್ಮಿ, ರೋಟರಿ ಕ್ಲಬ್‌ನ ಸಿದ್ದಲಿಂಗಮೂರ್ತಿ, ಸ್ವಪ್ನ, ಸ್ಮಿತಾ, ರೋಟರಿ ಉತ್ತರ ಅಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.
