Bhadravati All India Radio ಶಿವಮೊಗ್ಗ ನಗರದ ಸಿಬಿಆರ್ ಕಾನೂನು ಮಹಾ ವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಆಶ್ರಯದಲ್ಲಿ ಗಾಂಧಿ ಜಯಂತಿ ನಿಮಿತ್ತ ನಿನ್ನೆ ಶಾಂತಿ ಸಂದೇಶ ಸೌಹಾರ್ದ ಸಪ್ತಾಹ ಕಾರ್ಯಕ್ರಮದಡಿ ಗಾಂಧಿ ಪಾರ್ಕ್ ಸ್ವಚ್ಛತಾ ಕಾರ್ಯ ವನ್ನು ಎನ್ . ಎಸ್ ಎಸ್.ಹಾಗೂ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಳ್ಳ ಲಾಗಿತ್ತು. ಸ್ವಚ್ಛತಾ ಕಾರ್ಯ ಚಾಲನೆ ನೀಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎ. ಅನಲ ಅವರು, ವಿದ್ಯಾರ್ಥಿಗಳು ಶ್ರಮದಾನ ಮಾಡುವುದರ ಜೊತೆಗೆ ಗಾಂಧೀಜಿ ಆದರ್ಶಗಳನ್ನು ಮೈಗೂಡಿಸಿಕೊಳ್ಳ ಬೇಕು ಎಂದರು. ಈ ಸಂದರ್ಭದಲ್ಲಿ ಆಯೋ ಜಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. Bhadravati All India Radio ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್ ಸಂಯೋಜಕರಾದ ಡಾ. ಕಾಂತರಾಜ್ ಎಸ್. ಹಾಗೂ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ. ಆದರ್ಶ ಎಂ.ಎಸ್. ಉಪಸ್ಥಿತರಿದ್ದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕಾರಿ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನೆರವೇರಿಸಿದರು.
Bhadravati All India Radio ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ” ಸ್ವಚ್ಛತಾ ಹಿ ಸೇವಾ” ಚಟುವಟಿಕೆ
Date:
