Department of Empowerment of the Disabled and Senior Citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಸುವಿಧಾ ಯೋಜನೆಯಡಿ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿಕ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಯೋಜನೆಗಳನ್ನು ಡಿ.ಬಿ.ಟಿ ತಂತ್ರಾಂಶದ ಮೂಲಕ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
Department of Empowerment of the Disabled and Senior Citizens ಆಸಕ್ತ ಅರ್ಹ ವಿಕಲಚೇತನರು ಆನ್‌ಲೈನ್ ಮೂಲಕ ಗ್ರಾಮಾ ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟಲ್‌ನಲ್ಲಿ ಅ.15ರೊಳಗಾಗಿ ಅರ್ಜಿ ಸಲ್ಲಿಸಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಗಳಲ್ಲಿ ಆಯಾ ತಾಲೂಕು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ಎಂಆರ್. ಡಬ್ಲ್ಯೂ)ಗಳಿಗೆ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರು (ಯು.ಆರ್. ಡಬ್ಲ್ಯೂ)ಗಳಿಗೆ ನೀಡುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
