Rotary Club Shimoga ಒಳ್ಳೆಯ ಆಹಾರ ಸೇವನೆಯನ್ನು ಒಳಗೊಂಡ ಜೀವನಶೈಲಿ ಪಾಲಿಸುವುದರಿಂದ ಉತ್ತಮ ಆರೋಗ್ಯ ನಮ್ಮದಾಗುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಹೇಳಿದರು.
ಮಲವಗೊಪ್ಪದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು, ಎಸ್‌ಸಿಐ ಹಾಗೂ ಎಫ್‌ಪಿಎ ಸಹಯೋಗದಲ್ಲಿ ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಅರೋಗ್ಯ ತಪಾಸಣೆ ಹಾಗೂ ಎಚ್‌ಐವಿ ಪರೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಪ್ರತಿ ನಿತ್ಯ ವ್ಯಾಯಾಮ ಮಾಡಬೇಕು. ಆರೋಗ್ಯದ ಕಾಳಜಿ ವಹಿಸಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಒತ್ತಡದ ಜೀವನಶೈಲಿಯಿಂದ ಹೊರಬರಬೇಕು ಎಂದು ಸಲಹೆ ನೀಡಿದರು.
ರೋಟರಿ ಸಂಸ್ಥೆ ವಿಶ್ವದ ಎಲ್ಲೆಡೆ ಕ್ಲಬ್‌ಗಳನ್ನು ಹೊಂದಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು, ಸಾರ್ವಜನಿಕರಿಗೆ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಕೆಲಸ ಮಾಡುತ್ತಿದೆ ಎಂದರು.
Rotary Club Shimoga ರೋಟರಿಯ ರವಿ ಮಾತನಾಡಿ, ಸಮಯ ಪ್ರಜ್ಞೆ, ಶಿಸ್ತು, ಮಾನವೀಯತೆ ಗುಣಗಳನ್ನು ಅಳವಡಿಸಿಕೊಂಡು ಅರೋಗ್ಯಯುತ ಜೀವನವನ್ನು ನಡೆಸಬೇಕು ಎಂದು ತಿಳಿಸಿದರು. ರೋಗಿಗಳಿಗೆ ಮಧುಮೇಹ ಕಿಟ್, ಬಿಪಿ ಕಿಟ್, ಔಷಧ ಮಾತ್ರೆಗಳನ್ನು ವಿತರಿಸಲಾಯಿತು. ಎಸ್‌ಸಿಐ ಅಧ್ಯಕ್ಷ ಬಸವರಾಜ್, ಎಫ್‌ಪಿಐನ ಸತೀಶ್, ರವಿ, ನವೀನ, ಮುಸ್ತಾಕ್ ಅಲಿ ಶಾಹ್, ಬಾಪೂಜಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
