S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಗಾಂಧಿ ಪಾರ್ಕ್‌ನಲ್ಲಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತೋತ್ಸವ ಕಾರ್ಯಕ್ರಮಗಳಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
S.N.Chennabasappa ದೇಶದ ಸ್ವಾತಂತ್ರ್ಯ, ಅಹಿಂಸಾ ತತ್ವ ಮತ್ತು ಸತ್ಯದ ಮೌಲ್ಯಗಳನ್ನು ಪ್ರತಿಪಾದಿಸಿದ ಗಾಂಧಿಜಿಯವರ ಜೀವನ, ಸರಳತೆ ಹಾಗೂ ಪ್ರಾಮಾಣಿಕತೆಗೆ ಮಾದರಿಯಾದ ಶಾಸ್ತ್ರಿಜಿಯವರ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ತಿಳಿಸಿದರು.
